ADVERTISEMENT

ಕೋಡಿಪಾಳ್ಯಕ್ಕೆ ವಿಶೇಷ ಅಧಿಕಾರಿ ನೇಮಕ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2020, 14:59 IST
Last Updated 18 ಏಪ್ರಿಲ್ 2020, 14:59 IST
ಅಂಜನಾದ್ರಿ ಟ್ರಸ್ಟ್‌ ವತಿಯಿಂದ ಹಕ್ಕಿಪಿಕ್ಕಿ ಸಮುದಾಯದ  ಕುಟುಂಬಗಳಿಗೆ ದಿನಸಿ ಕಿಟ್‌ ಅನ್ನು ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ವಿತರಿಸಿದರು
ಅಂಜನಾದ್ರಿ ಟ್ರಸ್ಟ್‌ ವತಿಯಿಂದ ಹಕ್ಕಿಪಿಕ್ಕಿ ಸಮುದಾಯದ  ಕುಟುಂಬಗಳಿಗೆ ದಿನಸಿ ಕಿಟ್‌ ಅನ್ನು ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ವಿತರಿಸಿದರು   

ದೊಡ್ಡಬಳ್ಳಾಪುರ: ತಾಲ್ಲೂಕಿನ ಚನ್ನಾದೇವಿ ಅಗ್ರಹಾರ ಪಂಚಾಯಿತಿ ವ್ಯಾಪ್ತಿಯ ಕೋಡಿಪಾಳ್ಯ ಗ್ರಾಮದಲ್ಲಿ ಒಬ್ಬ ವ್ಯಕ್ತಿಗೆ ಕೋವಿಡ್‌-19 ದೃಢಪಟ್ಟ ಹಿನ್ನೆಲೆಯಲ್ಲಿ ತಹಶೀಲ್ದಾರ್ ಟಿ.ಎಸ್‌.ಶಿವರಾಜ್ ಅವರನ್ನು 2005ರ ವಿಪತ್ತು ನಿರ್ವಹಣಾ ಕಾಯ್ದೆಯಡಿ ವಿಶೇಷ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಈ ಆದೇಶ ಹೊರಡಿಸಿದ್ದಾರೆ.

ಕೋಡಿಪಾಳ್ಯ ಗ್ರಾಮದಲ್ಲಿನ ಎಲ್ಲಾ ಕುಟುಂಬಗಳನ್ನು ಹೋಂ ಕ್ವಾರಂಟೈನ್‌ ಮಾಡಲಾಗಿದೆ. ಇಲ್ಲಿನ ಎಲ್ಲ ಕುಟುಂಬಗಳಿಗೆ ಆಹಾರ, ನೀರು, ಔಷಧ ಹಾಗೂ ಇತರೆ ಮೂಲಭೂತ ಸೌಕರ್ಯ ಒದಗಿಸುವುದು. ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಇತರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಉಸ್ತುವಾರಿಯನ್ನು ವಿಶೇಷ ಅಧಿಕಾರಿಗಳು ನಿರ್ವಹಿಸಲಿದ್ದಾರೆ.

ದಿನಸಿ ಕಿಟ್‌ ವಿತರಣೆ: ಕೋಡಿಪಾಳ್ಯದ ಗ್ರಾಮದ ಹೊರ ಭಾಗದಲ್ಲಿ ವಾಸವಾಗಿರುವ ಹಕ್ಕಿಪಿಕ್ಕಿ ಕುಟುಂಬಗಳಿಗೆ ಅಂಜನಾದ್ರಿ ಟ್ರಸ್ಟ್‌ ವತಿಯಿಂದ ದಿನಸಿ ಕಿಟ್‌ಗಳನ್ನು ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ವಿತರಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್‌ ಟಿ.ಎಸ್‌.ಶಿವರಾಜ್‌, ಡಿವೈಎಸ್‌ಪಿ ಟಿ.ರಂಗಪ್ಪ, ಟ್ರಸ್ಟ್‌ ಸ್ಥಾಪಕರಾದ ಮುನಿರಾಜು, ದೀರಜ್‌, ಮುಖಂಡರಾದ ಪದ್ಮರಾಜ್‌, ಎನ್‌.ಕೆ.ರಮೇಶ್‌ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.