ADVERTISEMENT

‘ಸೈನ್ಯವನ್ನು ರಾಜಕೀಯಗೊಳಿಸಿಲ್ಲ’

ಸಮ್ಮಿಶ್ರ ಸರ್ಕಾರ ಉಳಿವಿಗೆ ಮೊಯಿಲಿಗೆ ಮತ ನೀಡಲು ಮನವಿ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2019, 13:49 IST
Last Updated 16 ಏಪ್ರಿಲ್ 2019, 13:49 IST
ಪ್ರತಿಕಾಗೋಷ್ಠಿಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರು
ಪ್ರತಿಕಾಗೋಷ್ಠಿಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರು   

ದೇವನಹಳ್ಳಿ: ಮುಖ್ಯಮಂತ್ರಿ ಕುಮಾರಸ್ವಾಮಿ ಐದು ವರ್ಷಗಳ ಆಡಳಿತ ಪೂರ್ಣಗೊಳಿಸಲು ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯಿಲಿಗೆ ಮತ ನೀಡುವುದು ಅನಿವಾರ್ಯಎಂದು ಕೆಪಿಸಿಸಿ ಜಿಲ್ಲಾ ಚುನಾವಣಾ ಉಸ್ತುವಾರಿ ಎ.ಸಿ. ಶ್ರೀನಿವಾಸ್ ಹೇಳಿದರು.

ಇಲ್ಲಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಜೆಡಿಎಸ್, ಕಾಂಗ್ರೆಸ್ ಮುಖಂಡರಿಂದ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ವೀರಪ್ಪ ಮೊಯಿಲಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಎಲ್ಲ ಸಮುದಾಯದ ಮಕ್ಕಳಿಗೆ ಉನ್ನತ ಶಿಕ್ಷಣ ವ್ಯಾಸಂಗ ಮಾಡಲು ಮೊದಲ ಬಾರಿಗೆ ಸಿಇಟಿ ಪರೀಕ್ಷೆ ತಂದದ್ದು ಮೊಯಿಲಿ. ಈಗಾಗಲೇ ಎತ್ತಿನಹೊಳೆ ಯೋಜನೆ ಕಾರ್ಯಗತವಾಗುತ್ತಿದೆ ಎಂದು ಹೇಳಿದರು.

ಬಿಜೆಪಿಯವರು ಅಭಿವೃದ್ಧಿ ಮಾಡುವುದಿಲ್ಲ. ಮಾಡಲೂ ಬಿಡುವುದಿಲ್ಲ. ಕೇಂದ್ರದಲ್ಲಿಬಿಜೆಪಿ ಐದು ವರ್ಷ ಆಡಳಿತ ನಡೆಸಿದ್ದಾರೆ. ಈ ವರ್ಷಗಳಲ್ಲಿ ಬಿಜೆಪಿ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ನೀಡಿದ ಕೊಡುಗೆ ಏನು? ಪ್ರಧಾನಿ ಮೋದಿ ಮಹಾ ಸುಳ್ಳುಗಾರ ಎಂದು ದೂರಿದರು.

ADVERTISEMENT

ಕೆಪಿಸಿಸಿ ರಾಜ್ಯ ಹಿಂದುಳಿದ ಘಟಕದ ಉಪಾಧ್ಯಕ್ಷ ಸಿ.ಜಗನ್ನಾಥ್ ಮಾತನಾಡಿ, ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಯುದ್ಧವನ್ನು ಗೆದ್ದಿದ್ದೇವೆ. ಅನೇಕ ಬಾರಿ ಸರ್ಜಿಕಲ್ ಸ್ಟ್ರೆಕ್ ನಡೆದಿದೆ. ಆದರೆ, ಪಕ್ಷ ಎಂದಿಗೂ ರಾಜಕೀಯಕ್ಕೆ ಬೆಳೆಸಿಕೊಂಡಿಲ್ಲ ಎಂದು ಆರೋಪಿಸಿದರು.

ಪುರಸಭೆ ಮಾಜಿ ಅಧ್ಯಕ್ಷ ಎಂ.ಮೂರ್ತಿ ಮಾತನಾಡಿ, ವೈಜ್ಞಾನಿಕ ಕ್ಷೇತ್ರ ಬೆಳವಣಿಗೆ ಅಡಿಗಲ್ಲು ಹಾಕಿದ್ದು ದಿ.ರಾಜೀವ್ ಗಾಂಧಿ. ಬಾಹ್ಯಾಕಾಶದ ಬೆಳವಣಿಗೆಗೆ ಕಾಂಗ್ರೆಸ್ ಕಾರಣ ಎಂದು ದೂರಿದರು.

ಕೆಪಿಸಿಸಿ ಹಿಂದುಳಿದ ವರ್ಗ ರಾಜ್ಯ ಘಟಕ ಪ್ರಧಾನ ಕಾರ್ಯದರ್ಶಿ ಆರ್.ರವಿಕುಮಾರ್, ಕೆಪಿಸಿಸಿ ಸದಸ್ಯ ಕೆ.ಪಟಾಲಪ್ಪ, ಜೆಡಿಎಸ್ ತಾಲ್ಲೂಕು ಘಟಕ ಪ್ರಧಾನ ಕಾರ್ಯದರ್ಶಿ ರವೀಂದ್ರ, ಜೆಡಿಎಸ್ ಟೌನ್ ಘಟಕ ಅಧ್ಯಕ್ಷ ಮುನಿನಂಜಪ್ಪ, ಮುಖಂಡರಾದ ಶಾಂತಕುಮಾರ್, ಖುದ್ದೂಸ್, ಸೋಮಣ್ಣ, ಜಿ.ಎನ್. ವೇಣುಗೋಪಾಲ್, ಟೌನ್ ಕಾಂಗ್ರಸ್ ಘಟಕ ಅಧ್ಯಕ್ಷ ಗೋಪಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.