ADVERTISEMENT

ಕರ್ತವ್ಯಕ್ಕೆ ಹಾಜರು: ಪ್ರಶಂಸನಾ ಪತ್ರ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2021, 4:42 IST
Last Updated 19 ಏಪ್ರಿಲ್ 2021, 4:42 IST
ಕರ್ತವ್ಯಕ್ಕೆ ಹಾಜರಾದ ಸಾರಿಗೆ ಸಿಬ್ಬಂದಿಗೆ ಪ್ರಶಂಸನ ಪತ್ರ ನೀಡಲಾಯಿತು
ಕರ್ತವ್ಯಕ್ಕೆ ಹಾಜರಾದ ಸಾರಿಗೆ ಸಿಬ್ಬಂದಿಗೆ ಪ್ರಶಂಸನ ಪತ್ರ ನೀಡಲಾಯಿತು   

ದೊಡ್ಡಬಳ್ಳಾಪುರ: ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದ ನಡುವೆಯೂ ಸಾರಿಗೆ ಬಸ್‌ ಸಂಚಾರ ಹೆಚ್ಚುತ್ತಿದೆ. ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಯ ಸಂಖ್ಯೆಯಲ್ಲೂ ಏರಿಕೆ ಕಾಣುತ್ತಿದೆ.ದೊಡ್ಡಬಳ್ಳಾಪುರ ವಿಭಾಗದಲ್ಲಿ ಭಾನುವಾರ 33ಕ್ಕೂ ಹೆಚ್ಚು ಬಸ್‌ಗಳು ಸಂಚಾರ ನಡೆಸಿದವು.

ದೊಡ್ಡಬಳ್ಳಾಪುರ ವಿಭಾಗದ 358 ನೌಕರರಲ್ಲಿ ಶೇ 35ಕ್ಕೂ ಅಧಿಕ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದರು. ಸೋಮವಾರ ಮತ್ತಷ್ಟು ಸಿಬ್ಬಂದಿ ಕೆಲಸಕ್ಕೆ ಬರುವ ನಿರೀಕ್ಷೆ ಇದ್ದು ಸಾರಿಗೆ ಸಂಚಾರದಲ್ಲಿ ಸುಧಾರಣೆ ಕಾಣುವ ಸಾಧ್ಯತೆ ಇದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ ಬೆಳಿಗ್ಗೆ ಕೆಲ ಸಿಬ್ಬಂದಿ ಸ್ವಯಂ ಪ್ರೇರಿತರಾಗಿ ಕರ್ತವ್ಯಕ್ಕೆ ಹಾಜರಾದ ಚಾಲಕರು ಮತ್ತು ನಿರ್ವಾಹಕರಿಗೆ ವ್ಯವಸ್ಥಾಪಕ ಆನಂದ್ ಹಾಗೂ ಸಹಾಯಕ ಆಡಳಿತಾಧಿಕಾರಿ ಶಿವನಾರಾಯಣ್ ಪ್ರಶಂಸನ ಪತ್ರ ಹಾಗೂ ಸಿಹಿ ನೀಡಿ ಆಹ್ವಾನಿಸಿದರು. ಕೆಎಸ್‌ಆರ್‌ಟಿಸಿ ಬಸ್‌ಗಳು ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರಿಂದ ಪ್ರಯಾಣಿಕರಲ್ಲಿ ಒಂದಿಷ್ಟು ಭರವಸೆ ಮೂಡಿತು. ರಸ್ತೆಯಲ್ಲಿಯೂ ಸಾರಿಗೆ ಬಸ್‌ ಸಂಚಾರ ಕಂಡುಬಂದವು.

ADVERTISEMENT

ಭಾನುವಾರ ದೊಡ್ಡಬಳ್ಳಾಪುರದಿಂದ ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ದೇವನಹಳ್ಳಿ, ನೆಲಮಂಗಲ, ದಾಬಸ್ ಪೇಟೆ, ಗೌರಿಬಿದನೂರು ಮಾರ್ಗದಲ್ಲಿ ಬಸ್‌ಗಳು ಸಂಚರಿಸಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.