ADVERTISEMENT

ಅತ್ತಿಬೆಲೆ: ಶಾಲಾ ಕೊಠಡಿಗಳ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2026, 2:46 IST
Last Updated 14 ಫೆಬ್ರುವರಿ 2026, 2:46 IST
ಆನೇಕಲ್‌ ತಾಲ್ಲೂಕಿನ ಅತ್ತಿಬೆಲೆಯ ಜಯಭಾರತಿ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ದಾನಿಗಳ ಸಹಾಯದಿಂದ ನಿರ್ಮಿಸಿರುವ 1ಕೋಟಿ ರೂ. ವೆಚ್ಚದ 5 ಕೊಠಡಿಗಳನ್ನು ಉದ್ಘಾಟಿಸಲಾಯಿತು
ಆನೇಕಲ್‌ ತಾಲ್ಲೂಕಿನ ಅತ್ತಿಬೆಲೆಯ ಜಯಭಾರತಿ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ದಾನಿಗಳ ಸಹಾಯದಿಂದ ನಿರ್ಮಿಸಿರುವ 1ಕೋಟಿ ರೂ. ವೆಚ್ಚದ 5 ಕೊಠಡಿಗಳನ್ನು ಉದ್ಘಾಟಿಸಲಾಯಿತು   

ಅತ್ತಿಬೆಲೆ(ಆನೇಕಲ್): ಅತ್ತಿಬೆಲೆಯ ಜಯಭಾರತಿ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ದಾನಿಗಳ ಸಹಾಯದಿಂದ ನಿರ್ಮಿಸಿರುವ ₹1ಕೋಟಿ ವೆಚ್ಚದ ಐದು ಕೊಠಡಿಗಳು, ಗ್ರಂಥಾಲಯ ಮತ್ತು ವಿಜ್ಞಾನ ಪ್ರಯೋಗಾಲಯ ಮತ್ತು ಗಣಕ ಪ್ರಯೋಗಾಲಯವನ್ನ ಶುಕ್ರವಾರ ಉದ್ಘಾಟಿಸಲಾಯಿತು.

ಪಟ್ಟನಾಯಕನಹಳ್ಳಿ ಮಠದ ನಂಜಾವಧೂತ ಸ್ವಾಮೀಜಿ, ಅನುದಾನಿತ ಶಾಲೆಗಳ ಅಭಿವೃದ್ಧಿಗೆ ಸಂಘ ಸಂಸ್ಥೆಗಳು, ದಾನಿಗಳು ಕೈಜೋಡಿಸಬೇಕು. ಇದರಿಂದ ಮೂಲಸೌಲಭ್ಯಗಳ ಅಭಿವೃದ್ಧಿಯಾಗುತ್ತದೆ. ದುಬಾರಿ ಶುಲ್ಕದಿಂದ ಎಲ್ಲರೂ ಸಹ ಖಾಸಗಿ ಶಾಲೆಗಳಲ್ಲಿ ಓದಲಾಗುವುದಿಲ್ಲ. ಅನುದಾನಿತ ಶಾಲೆಗಳ ಅಭಿವೃದ್ಧಿಯಿಂದ ಮಧ್ಯಮ ವರ್ಗಕ್ಕೆ ಹೆಚ್ಚು ಅನುಕೂಲವಾಗಲಿದೆ ಎಂದರು.

ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ, ನಟ ಶ್ರೀನಾಥ್‌, ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜುನಾಥ್‌, ಬಮುಲ್ ಮಾಜಿ ಅಧ್ಯಕ್ಷ ಬಿ.ಜಿ.ಆಂಜಿನಪ್ಪ, ಜಯಭಾರತಿ ಶೈಕ್ಷಣಿಕ ಸಹಕಾರ ಸಂಘದ ಅಧ್ಯಕ್ಷ ಶಿವಕುಮಾರ್‌, ಮುಖಂಡರಾದ ಅತ್ತಿಬೆಲೆ ಬಸವರಾಜು, ಪಟಾಪಟ್‌ ಶ್ರೀನಿವಾಸ್, ಶಿವಕೀರ್ತಿ, ಮುನಿರತ್ನ, ರಾಜಶೇಖರ್, ವೆಂಕಟೇಶ್, ಮುರಳಿ ಮೋಹನ್‌ ರೆಡ್ಡಿ, ಗೋವಿಂದಪ್ಪ, ಬೋಜರಾಜು, ಚರಣ್‌, ಪಿ.ನಾರಾಯಣಸ್ವಾಮಿ, ಅತ್ತಿಬೆಲೆ ಸೂರಿ, ನರಸಿಂಹಮೂರ್ತಿ, ಸೋಮಶೇಖರ್‌ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.