ಆನೇಕಲ್: ತಾಲ್ಲೂಕಿನ ಹಾರಗದ್ದೆಯ ಆವಲಗಂಗ್ಮಮ ದೇವಿ ದೇವಾಲಯದ ಎರಡನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆನೆ ಅಂಬಾರಿ ಉತ್ಸವವು ಮಂಗಳವಾರ ವಿಜೃಂಭಣೆಯಿಂದ ನಡೆಯಿತು. ವಿವಿಧ ಜಾನಪದ ಕಲಾತಂಡಗಳು ಆನೆ ಅಂಬಾರಿ ಉತ್ಸವಕ್ಕೆ ಮೆರುಗು ನೀಡಿದವು.
ವಾರ್ಷಿಕೋತ್ಸವದ ಪ್ರಯುಕ್ತ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಮಹಿಳೆಯರು ಬೆಳಗಿನಿಂದಲೇ ದೇವಿಗೆ ಪೂಜೆ ಸಲ್ಲಿಸಲು ಸರತಿ ಸಾಲಿನಲ್ಲಿ ನಿಂತಿದ್ದರು. ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಆನೆ ಅಂಬಾರಿ ವೀಕ್ಷಿಸಲು ಬಂದಿದ್ದರು.
ಆವಲಗಂಗಮ್ಮ ದೇವಿಯ ಉತ್ಸವ ಮೂರ್ತಿಯನ್ನು ಅಂಬಾರಿಯಲ್ಲಿ ಕುಳ್ಳರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ವೀರಗಾಸೆ, ಡೊಳ್ಳುಕುಣಿತ, ಪೂಜಾ ಕುಣಿತ, ಗೊಂಬೆ ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.