ಹೊಸಕೋಟೆ: ತಾಲ್ಲೂಕಿನ ನಂದಗುಡಿ ಹೋಬಳಿಯ ಬೈಲನರಸಾಪುರ ಗ್ರಾಮ ಪಂಚಾಯಿತಿ ಕೇಂದ್ರದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಹೆಡಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡೆಂಗಿ ಹಾಗೂ ಚಿಕನ್ ಗುನ್ಯಾ ತಡೆ ಅರಿವು ಕಾರ್ಯಕ್ರಮ ನಡೆಯಿತು.
ಅರೋಗ್ಯ ಸಹಾಯಕಿ ಮೋಸಿನ್ ಬೇಗಂ, ‘ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿಟ್ಟುಕೊಳ್ಳಬೇಕು. ದೀರ್ಘಕಾಲಿಕವಾಗಿ ನೀರು ನಿಲ್ಲುವುದನ್ನು ತಪ್ಪಿಸಬೇಕು. ಮನೆಯಲ್ಲಿರುವ ನೀರು ಸಂಗ್ರಹಕಗಳನ್ನು ಶುದ್ಧವಾಗಿ ಇಟ್ಟುಕೊಳ್ಳಬೇಕು. ಆಗಾಗ ಔಷಧಿ ಸಿಂಪಡಿಸುತ್ತಿರಬೇಕು ಎಂದರು.
ಶಾಲೆ ಆವರಣ ಹಾಗೂ ತಮ್ಮ ಮನೆಗಳ ಬಳಿ ಸ್ವಚ್ಛತೆ ಕಾಪಾಡುವುದು, ನೀರು ನಿಲ್ಲದಂತೆ ನೋಡಿಕೊಳ್ಳುವುದು, ಬ್ಲೀಚಿಂಗ್, ಪೆನಾಯಿಲ್ ಪ್ರತಿದಿನ ಸಿಂಪಡಿಸಬೇಕು. ಘನ ತ್ಯಾಜ್ಯ ವಸ್ತುಗಳ ವಿಲೇವಾರಿ, ತೆಂಗಿನ ಚಿಪ್ಪು, ಖಾಲಿ ಬಾಟಲು, ಟೈರು, ಖಾಲಿ ಡ್ರಮ್ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಜ್ವರ, ನೆಗಡಿ ಇತರೆ ಯಾವುದೇ ರೋಗ ಲಕ್ಷಣ ಕಾಣಿಸಿಕೊಂಡರೆ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆಗೆ ಒಳಗಾಗಬೇಕು ಎಂದು ಹೇಳಿದರು.
ಶಾಲೆಯ ಮುಖ್ಯೋಪಾಧ್ಯಾಯ ಕೆ.ವಿ.ಶ್ರೀಕಾಂತ, ಸಹ ಶಿಕ್ಷಕರಾದ ಎನ್.ಕೆ.ರಮೇಶ್, ಕೆ.ಗೋವಿಂದರಾಜು, ಚಂದ್ರಿಕಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.