ADVERTISEMENT

ಬೆಂಗಳೂರು ವಿಮಾನ ನಿಲ್ದಾಣ: 3.72 ಕೋಟಿ ಪ್ರಯಾಣಿಕರ ಸಂಚಾರ

​ಪ್ರಜಾವಾಣಿ ವಾರ್ತೆ
Published 13 ಜನವರಿ 2024, 12:36 IST
Last Updated 13 ಜನವರಿ 2024, 12:36 IST
ದೇವನಹಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್‌–2 
ದೇವನಹಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್‌–2    

ದೇವನಹಳ್ಳಿ: 2023ನೇ ಸಾಲಿನಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎ) 3.72 ಕೋಟಿ ಪ್ರಯಾಣಿಕರು ಸಂಚಾರ ಮಾಡಿದ್ದಾರೆ. 2022ಕ್ಕೆ ಹೋಲಿಸಿದರೆ ಶೇ 35ರಷ್ಟು ಏರಿಕೆ ‌ಕಂಡಿದೆ ಎಂದು ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ.

3.27 ಕೋಟಿ ಪ್ರಯಾಣಿಕರು ದೇಶೀಯವಾಗಿ ಮತ್ತು 45 ಲಕ್ಷ ಪ್ರಯಾಣಿಕರು ಅಂತರರಾಷ್ಟ್ರೀಯಮಟ್ಟದಲ್ಲಿ ಪ್ರಯಾಣಿಸಿದ್ದಾರೆ. ಏಪ್ರಿಲ್‌ 29ರಂದು ಒಂದೇ ದಿನ 1.16 ಲಕ್ಷ ಮಂದಿ ಪ್ರಯಾಣಿಸಿರುವುದು ದಾಖಲೆಯಾಗಿದೆ ಎಂದು ಮಾಹಿತಿ ನೀಡಿದೆ.

ಅಲ್ಲದೇ, ಆರ್ಥಿಕ‌ ಹಾಗೂ ವ್ಯಾ‍ಪಾರ–ವಹಿವಾಟು ಪರಿಸ್ಥಿತಿಯೂ ಸುಧಾರಿಸಿದೆ. ಹಾಗಾಗಿ, ಪ್ರಯಾಣಿಕರ ಸಂಖ್ಯೆಯಲ್ಲೂ ಏರಿಕೆಯಾಗಿದೆ ಎಂದು ತಿಳಿಸಿದೆ. ‌

ADVERTISEMENT

ಸರಕು ಸಾಗಣೆ ಕೇಂದ್ರವಾಗಿ ಬೆಂಗಳೂರು ವಿಮಾನ ನಿಲ್ದಾಣ ವೇಗವಾಗಿ ಬಲವರ್ಧನೆಗೊಳ್ಳುತ್ತಿದೆ. 53,751 ಮೆಟ್ರಿಕ್ ಟನ್‌ ಸರಕು ಸಾಗಣೆ ಮಾಡುವ ಮೂಲಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿ ಮುಂದುವರಿದಿದೆ ಎಂದು ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.