ADVERTISEMENT

ಗುಂಡಿ ಮುಚ್ಚಲು ಅನುದಾನ ನೀಡಿ: ಶಾಸಕ ಬಿ.ಶಿವಣ್ಣ ಒತ್ತಾಯ

ಸರ್ಕಾರಕ್ಕೆ ಆನೇಕಲ್ ಶಾಸಕ ಬಿ.ಶಿವಣ್ಣ ಒತ್ತಾಯ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2022, 6:13 IST
Last Updated 13 ಸೆಪ್ಟೆಂಬರ್ 2022, 6:13 IST
ಆನೇಕಲ್ ತಾಲ್ಲೂಕಿನ ಬಿದರಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೇನೂರು ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕ ಬಿ.ಶಿವಣ್ಣ ಭೂಮಿ ಪೂಜೆ ನೆರವೇರಿಸಿದರು
ಆನೇಕಲ್ ತಾಲ್ಲೂಕಿನ ಬಿದರಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೇನೂರು ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕ ಬಿ.ಶಿವಣ್ಣ ಭೂಮಿ ಪೂಜೆ ನೆರವೇರಿಸಿದರು   

ಆನೇಕಲ್ : ತಾಲ್ಲೂಕಿನ ಬಿದರಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೇನೂರು ಗ್ರಾಮದಲ್ಲಿ ಕಾಂಕ್ರಿಟ್‌ ರಸ್ತೆ ಕಾಮಗಾರಿಗೆ ಶಾಸಕ ಬಿ.ಶಿವಣ್ಣ ಭೂಮಿ ಪೂಜೆ ನೆರವೇರಿಸಿದರು.

ಶಾಸಕ ಬಿ.ಶಿವಣ್ಣ ಮಾತನಾಡಿ, ‘ಆನೇಕಲ್‌ ತಾಲ್ಲೂಕಿನ ಬಹುತೇಕ ಎಲ್ಲಾ ಗ್ರಾಮಗಳ ರಸ್ತೆಗಳನ್ನು ಸರ್ವ ಋತು ರಸ್ತೆಗಳನ್ನಾಗಿ ಮಾಡಲಾಗಿತ್ತು. ಆದರೆ ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ಶೇ 70ರಷ್ಟು ರಸ್ತೆಗಳು ಹಾಳಾಗಿವೆ. ಗುಂಡಿಗಳು ಬಿದ್ದಿವೆ. ಹಾಗಾಗಿ ರಾಜ್ಯ ಸರ್ಕಾರ ಗುಂಡಿಗಳನ್ನು ಮುಚ್ಚಲು ಮತ್ತು ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

‘ಜನರು ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ರಸ್ತೆ ನಿರ್ಮಿಸಬೇಕಾದ್ದು ಸರ್ಕಾರದ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ತಾಲ್ಲೂಕಿಗೆ ಆಗಬೇಕಾದ ಪ್ರಮುಖ ಬೇಡಿಕೆ ಗುರುತಿಸಲಾಗಿದೆ. ಸಂಬಂಧಿಸಿದ ಸಚಿವರನ್ನು ಭೇಟಿ ಮಾಡಿ ಹೆಚ್ಚಿನ ಅನುದಾನಕ್ಕೆ ಮನವಿ ಸಲ್ಲಿಸಲಾಗುವುದು’ ಎಂದರು.

ADVERTISEMENT

ನೆರಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರುಮಗೊಂಡನಹಳ್ಳಿ, ಯಡವನಹಳ್ಳಿ, ಬಿದರಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೇನೂರು, ಹಂದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೊಳ್ಳೆಪುರ, ಮುತ್ತಾನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮನಹಳ್ಳಿ ಗ್ರಾಮಗಳಲ್ಲಿ ಕಾಂಕ್ರಿಟ್‌ ರಸ್ತೆ ಕಾಮಗಾರಿಗಳಿಗೆ ಪೂಜೆ ಸಲ್ಲಿಸಲಾಗಿದೆ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮೋಹನ್‌ ಬಾಬು, ರಘುಪತಿರೆಡ್ಡಿ, ಮುಖಂಡರಾದ ಬಿದರಗುಪ್ಪೆ ಶಂಕರರೆಡ್ಡಿ, ರಾಜಪ್ಪ, ಗುಡ್ಡಹಟ್ಟಿ ಶಂಭಯ್ಯ, ರಾಜಶೇಖರ್, ಬಿದರಗುಪ್ಪೆ ಗ್ರಾಮ ಪಂಚಾಯಿತಿ ಸದಸ್ಯರಾದ ರೇಖಾ ಮಂಜುನಾಥ್, ಸುದೀಂದ್ರ, ಬಿ.ಎಂ.ಎಸ್‌.ಮಂಜು, ಕುಮಾರ್, ಕಮಲಾ, ಮುಖಂಡರಾದ ಅನಂತು, ನವೀನ್‌, ಆನಂದ್‌ರೆಡ್ಡಿ, ವೆಂಕಟಸ್ವಾಮಿರೆಡ್ಡಿ, ಶುಭ ಶ್ರೀಧರ್, ರಾಜರೆಡ್ಡಿ, ಜಯರಾಮ್‌ ಸರ್ಜಾ, ರವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.