ದೊಡ್ಡಬಳ್ಳಾಪುರ: ಗ್ರಾಮಾಂತರ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ವಿಭಾಗವಾರು ಅಧಿಕಾರಿಗಳ ಸಭೆ ನಡೆಸಿ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರುಹೇಳಿದರು.
ಅಖಿಲ ಕರ್ನಾಟಕ ತೊಗಟವೀರ ಕ್ಷತ್ರಿಯ ಸಂಘಗಳ ಮಹಾಮಂಡಳಿ, ಪುಷ್ಪಾಂಡಜ ಮಹರ್ಷಿ ಗುರುಪೀಠ ಟ್ರಸ್ಟ್ ಆಶ್ರಯದಲ್ಲಿ ತಾಲ್ಲೂಕಿನ ತಪಸೀಹಳ್ಳಿಯಲ್ಲಿ ಸೋಮವಾರ ಆಯೋಜಿಸಿದ್ದ ದಿವ್ಯಜ್ಞಾನಾನಂದಗಿರಿ ಸ್ವಾಮೀಜಿ ಜನ್ಮದಿನ ಹಾಗೂ ಅನ್ನದಾಸೋಹ ಭವನ ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಬಜೆಟ್ ಅಭಿವೃದ್ಧಿ ಪರ ಹಾಗೂ ಜನಪರ ಯೋಜನೆಗಳನ್ನು ಘೋಷಣೆ ಮಾಡುವ ಮೂಲಕ ಉತ್ತಮ ಬಜೆಟ್ ಮಂಡನೆಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಬಿಬಿಎಂಪಿ ಮಾಜಿ ಉಪಮೇಯರ್ ಹರೀಶ್, ಪುಷ್ಪ್ಪಾಂಡಜ ಮಹರ್ಷಿ ಗುರುಪೀಠದ ದಿವ್ಯಜ್ಞಾನಾನಂದಗಿರಿ ಸ್ವಾಮೀಜಿ, ಪುಷ್ಪ್ಪಾಂಡಜ ಮಹರ್ಷಿ ಗುರುಪೀಠ ಟ್ರಸ್ಟ್ ಅಧ್ಯಕ್ಷ ಅಶ್ವತ್ಥನಾರಾಯಣ್, ಅನ್ನದಾಸೋಹ ಭವನದ ದಾನಿ ರೇಣುಕಾ ನಾಗಪ್ರಿಯ, ತೋಟಗವೀರ ಕ್ಷತ್ರಿಯ ಸಂಘದ ಅಧ್ಯಕ್ಷ ಗಡ್ಡಂ ಸುನೀತಾ ಶ್ರೀನಿವಾಸ್, ಡಿವೈಎಸ್‌ಪಿ ಟಿ.ರಂಗಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.