- ಐಸ್ಟಾಕ್ ಚಿತ್ರ
ಪ್ರಜಾವಾಣಿ ವಾರ್ತೆ
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಡಿ.21 ರಂದು ನಡೆಯಲಿದ್ದು, ಈವರೆಗೆ ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ.
4ನೇ ವಾರ್ಡ್ ಅರೇಹಳ್ಳಿ ಗುಡ್ಡದಹಳ್ಳಿ ಸಾಮಾನ್ಯ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀನಿವಾಸರೆಡ್ಡಿ ಹಾಗೂ 5ನೇ ವಾರ್ಡ್ ವರದನಹಳ್ಳಿ(ಪೂರ್ವ) ಪರಿಶಿಷ್ಟ ಜಾತಿ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸಿ.ಮುನೀಂದ್ರ ನಾಮಪತ್ರ ಸಲ್ಲಿಸಿದ್ದಾರೆ.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ 19 ವಾರ್ಡುಗಳಿವೆ. 1ರಿಂದ 10ನೇ ವಾರ್ಡ್‌ವರೆಗೆ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಮಪತ್ರ ಸಲ್ಲಿಸಲು ಹಾಗೂ 11ರಿಂದ 19ನೇ ವಾರ್ಡ್‌ವರೆಗೆ ಅಂಬೇಡ್ಕರ್ ಭವನದಲ್ಲಿ ನಾಮಪತ್ರ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ. ಡಿ.9 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ಡಿ.10 ನಾಮಪತ್ರಗಳನ್ನು ಪರಿಶೀಲನೆ. ಡಿ. 12 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ. ಡಿ.8ರಂದು ಹೆಚ್ಚಿನ ಜನ ನಾಮಪತ್ರ ಸಲ್ಲಿಸುವ ನಿರೀಕ್ಷೆ ಇದೆ.
ದೊಡ್ಡಬಳ್ಳಾಪುರ ನಗರಸಭೆಯ 21 ನೇ ವಾರ್ಡ್ ನ ಹೇಮಾವತಿಪೇಟೆ ವಾರ್ಡ್ ಸದಸ್ಯರಾಗಿದ್ದ ಎಸ್.ಎ.ಭಾಸ್ಕರ್ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಡಿ.21ರಂದು ಉಪ ಚುನಾವಣೆ ನಡೆಯಲಿದ್ದು, ಇಲ್ಲಿಯವರೆಗೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.