ADVERTISEMENT

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ: 74 ನಾಮಪತ್ರ ಕ್ರಮಬದ್ಧ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2025, 2:19 IST
Last Updated 11 ಡಿಸೆಂಬರ್ 2025, 2:19 IST
<div class="paragraphs"><p>ಚುನಾವಣೆ</p></div>

ಚುನಾವಣೆ

   

ದೊಡ್ಡಬಳ್ಳಾಪುರ: ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ 19 ವಾರ್ಡ್‌ಗಳಿಗೆ ಡಿ.21 ರಂದು ನಡೆಯಲಿರುವ ಚುನಾವಣೆಯ ನಾಮಪತ್ರಗಳ ಪರಿಶೀಲನೆ ಬುಧವಾರ ನಡೆಯಿತು. 82 ನಾಮಪತ್ರಗಳ ಪೈಕಿ 5 ನಾಮಪತ್ರಗಳು ತಿರಸ್ಕೃತವಾಗಿವೆ.

74 ಅಭ್ಯರ್ಥಿಗಳಿಂದ 77 ನಾಮಪತ್ರಗಳ ಸಲ್ಲಿಕೆಯಾಗಿ ಕ್ರಮಬದ್ಧವಾಗಿವೆ. ಡಿ. 12 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ಕಣದಲ್ಲಿ ಎಷ್ಟು ಮಂದಿ ಉಳಿಯಲಿದ್ದಾರೆ ಎನ್ನುವುದು ಅಂತಿಮವಾಗಲಿದೆ.

ADVERTISEMENT

ನಗರಸಭೆ ಉಪಚುನಾವಣೆ: ದೊಡ್ಡಬಳ್ಳಾಪುರ ನಗರಸಭೆಯ 21 ನೇ ವಾರ್ಡ್‌ನ ಹೇಮಾವತಿಪೇಟೆ ವಾರ್ಡ್‌ ಚುನಾವಣೆಗೆ ಒಟ್ಟು ನಾಲ್ಕು ಜನ ಅಭ್ಯರ್ಥಿಗಳಿಂದ 6 ನಾಮಪತ್ರಗಳು ಸಲ್ಲಿಕೆಯಾಗಿದ್ದು, 6 ನಾಮಪತ್ರಗಳು ಕ್ರಮಬದ್ಧವಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.