ADVERTISEMENT

ರಾತ್ರಿ ವೇಳೆ ಗುಂಡಿ ಮುಚ್ಚಲು ಬಿಬಿಎಂಪಿ ಕ್ರಮ

ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಕಾಮಗಾರಿ ಅನುಷ್ಠಾನ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2021, 19:31 IST
Last Updated 11 ಸೆಪ್ಟೆಂಬರ್ 2021, 19:31 IST

ಬೆಂಗಳೂರು: ನಗರದ ವ್ಯಾಪ್ತಿಯ ಪ್ರಮುಖ ರಸ್ತೆ, ವಾರ್ಡ್ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುವ ಕಾಮಗಾರಿಗಳನ್ನು ಬಿಬಿಎಂಪಿ ರಾತ್ರಿ ವೇಳೆ ನಡೆಸುತ್ತಿದೆ. ವಾಹನ ಸವಾರರಿಗೆ ಯಾವುದೇ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಬಿಬಿಎಂಪಿ ಈ ಕ್ರಮ ಕೈಗೊಂಡಿದೆ.

ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್ ಬಳಿ, ನಾಗರಬಾವಿ ಸರ್ವೀಸ್ ರಸ್ತೆಯಿಂದ ನಾಯಂಡಹಳ್ಳಿ ವರ್ತುಲ ರಸ್ತೆಯ ಸರ್ವೀಸ್ ರಸ್ತೆಯಲ್ಲಿ ಗುಂಡಿಗಳು ಬಿದ್ದಿರುವುದರಿಂದ ಮಳೆ ನೀರು ತುಂಬಿ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಇಲ್ಲಿ ಸಂಚಾರ ದಟ್ಟಣೆ ಸಮಸ್ಯೆಯೂ ಎದುರಾಗುತ್ತಿದ್ದು, ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು ಎಂದು ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯವರು ಬಿಬಿಎಂಪಿಗೆ ಮನವಿ ಸಲ್ಲಿಸಿದ್ದರು.

ಪಾಲಿಕೆಯ ಸಂಚಾರ ಎಂಜಿನಿಯರಿಂಗ್ ವಿಭಾಗದವರು ರಾತ್ರಿ 2.30ರವರೆಗೂ ಡಾಂಬರೀಕರಣ ಕಾಮಗಾರಿ ನಡೆಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ADVERTISEMENT

ಪಾಲಿಕೆಯ ಎಂಟೂ ವಲಯಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ತ್ವರಿತಗತಿಯಲ್ಲಿ ನಡೆಯುತ್ತಿದೆ. ಜರಗನಹಳ್ಳಿ, ಬನಶಂಕರಿ ಎರಡನೇ ಹಂತ, ಎಚ್.ಎಂ.ಟಿ ಲೇಔಟ್, ಯಡಿಯೂರು, ಬೆಳ್ಳಂದೂರು, ಸಿದ್ದಣ್ಣ ಲೇಔಟ್, ತಿಗಳರ ಪಾಳ್ಯ (ಹೂಡಿ), ನ್ಯೂ ಬಿ.ಇ.ಎಲ್ ರಸ್ತೆ, ಭೂಪಸಂದ್ರ, ಹೆಬ್ಬಾಳ ಮುಖ್ಯ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚುವ ಕಾಮಗಾರಿ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.