ADVERTISEMENT

ದೊಡ್ಡಬಳ್ಳಾಪುರ: ಕಸ ವಿಲೇವಾರಿಗೆ ವಿರೋಧ, ಅನಿರ್ದಿಷ್ಟಾವಧಿ ಧರಣಿ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2020, 7:13 IST
Last Updated 6 ಮಾರ್ಚ್ 2020, 7:13 IST
ರೈತರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಧರಣಿಯಲ್ಲಿ ಭಾಗವಹಿಸಿದ್ದಾರೆ.
ರೈತರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಧರಣಿಯಲ್ಲಿ ಭಾಗವಹಿಸಿದ್ದಾರೆ.    

ದೊಡ್ಡಬಳ್ಳಾಪುರ: ಬಿಬಿಎಂಪಿ ವ್ಯಾಪ್ತಿಯಿಂದ ತಾಲ್ಲೂಕಿನ ಗುಂಡ್ಲಹಳ್ಳಿ, ಎಂಎಸ್‌ಜಿಪಿ ಕಸವಿಲೇವಾರಿ ಘಟಗಳಿಗೆ ಕಸ ತಂದು ಸುರಿಯುವುದನ್ನು ಬಂದ್ ಮಾಡುವಂತೆ ಆಗ್ರಹಿಸಿ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಿರೋಧಿ ಹೋರಾಟ ಸಮಿತಿಯಿಂದ ಅನಿರ್ದಿಷ್ಟವಾಧಿ ಧರಣಿ ಆರಂಭವಾಗಿದೆ.

ಕಸ ವಿಲೇವಾರಿ ಘಟಕಗಳ ಸುತ್ತಲಿನ ಗ್ರಾಮಗಳ ರೈತರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಂಘಟನೆಗಳ ಪದಾಧಿಕಾರಿಗಳು ನೂರಾರು ಸಂಖ್ಯೆಯಲ್ಲಿ ಧರಣಿಯಲ್ಲಿ ಭಾಗವಹಿಸಿದ್ದಾರೆ.

ಬೆಂಗಳೂರಿನಿಂದ ಪ್ರತಿ ದಿನ ಸುಮಾರು 170ಕ್ಕೂ ಹೆಚ್ಚಿನ ಲಾರಿಗಳು ಕಸ ತುಂಬಿಕೊಂಡು ಬರುತಿದ್ದವು. ಆದರೆ ಧರಣಿ ಹಿನ್ನೆಲೆಯಲ್ಲಿ ಶುಕ್ರವಾರ ಯಾವುದೇ ಕಸದ ಲಾರಿಗಳು ಈ ಕಡೆಗೆ ಸುಳಿದಿಲ್ಲ.

ADVERTISEMENT

ಧರಣಿ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಂದೋಬಸ್ತ್ ಏರ್ಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.