ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತಿಥ್ಯ ಕ್ಷೇತ್ರದಲ್ಲಿ ಒಟ್ಟು ಹತ್ತು ಜಾಗತಿಕ ಪ್ರಶಸ್ತಿ ದೊರೆತಿವೆ.
ಸ್ಪೇನ್‌ನ ಬಾರ್ಸಿಲೋನಾದಲ್ಲಿ ಈಚೆಗೆ ನಡೆದ ‘ವಿಮಾನ ನಿಲ್ದಾಣ ಆಹಾರ, ಪಾನೀಯ (ಎಫ್ ಆ್ಯಂಡ್ ಬಿ) ಹಾಗೂ ಆತಿಥ್ಯ ಕ್ಷೇತ್ರ’ದ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 1 ಹಾಗೂ 2ರಲ್ಲಿರುವ ದೇಶೀಯ ಹಾಗೂ ಅಂತರರಾಷ್ಟ್ರೀಯ ಲಾಂಜ್‌ಗಳಲ್ಲಿಯ ಪ್ರಯಾಣಿಕರ ಸ್ನೇಹಿ ವಾತಾವರಣ, ರೆಸ್ಟೋರೆಂಟ್ ವಿನ್ಯಾಸ ಹಾಗೂ ಇಲ್ಲಿ ಪೂರೈಸುವ ಆಹಾರ ಮತ್ತು ಪಾನೀಯಗಳ ಗುಣಮಟ್ಟಕ್ಕೆ ಒಟ್ಟು ಹತ್ತು ಜಾಗತಿಕ ಪ್ರಶಸ್ತಿ ಲಭಿಸಿವೆ.
ವಿವಿಧ ವಿಭಾಗಗಳಲ್ಲಿ ಏಕಕಾಲಕ್ಕೆ ಇಷ್ಟೊಂದು ಪ್ರಶಸ್ತಿ ಮುಡಿಗೇರಿಸಿಕೊಂಡ ವಿಮಾನ ನಿಲ್ದಾಣಗಳ ಪೈಕಿ ಬೆಂಗಳೂರು ವಿಮಾನ ನಿಲ್ದಾಣ ಕೂಡ ಒಂದಾಗಿದೆ. ಇಲ್ಲಿ ಸಿಗುವ ಆಹಾರ ಮತ್ತು ಪಾನೀಯಗಳ ಗುಣಮಟ್ಟ ಭಾರತದಲ್ಲಿ ಮಾತ್ರವಲ್ಲದೆ, ಜಾಗತಿಕವಾಗಿಯೂ ಶ್ರೇಷ್ಠವಾಗಿವೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮುಖ್ಯ ವಾಣಿಜ್ಯ ಅಧಿಕಾರಿ ಕೆನ್ನೆತ್ ಗುಲ್ಡ್‌ಬ್ಜೆರ್ಗ್ ಪ್ರತಿಕ್ರಿಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.