ಆನೇಕಲ್: ತಾಲ್ಲೂಕಿನ ಬನ್ನೇರುಘಟ್ಟ ಸಮೀಪದ ಭೂತಾನಹಳ್ಳಿಯಲ್ಲಿ ಒತ್ತುವರಿಯಾಗಿದ್ದ ಅಂದಾಜು ₹25ಕೋಟಿ ಮೌಲ್ಯದ ಕಿರು ಅರಣ್ಯವನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ.
ಬೆಂಗಳೂರು ನಗರ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಒತ್ತುವರಿ ತೆರವುಗೊಳಿಸಿ ಕಿರು ಅರಣ್ಯದಲ್ಲಿ ಗಿಡಗಳನ್ನು ನೆಟ್ಟಿದ್ದಾರೆ.
ಬನ್ನೇರುಘಟ್ಟ ಸಮೀಪದ ಭೂತಾನಹಳ್ಳಿಯ ಸರ್ವೆ ನಂ.67ರಲ್ಲಿನ ಕಿರು ಅರಣ್ಯ ಪ್ರದೇಶದ ಪೈಕಿ ಐದು ಎಕರೆ ಅರಣ್ಯ ಜಮೀನು ಒತ್ತುವರಿಯಾಗಿತ್ತು. ಅರಣ್ಯ ಇಲಾಖೆಯ ಸಿಬ್ಬಂದಿ ಶನಿವಾರ ಕಾರ್ಯಾಚರಣೆ ನಡೆಸಿ, ಒತ್ತುವರಿ ತೆರವುಗೊಳಿಸಿದರು.
ಉಪ ಅರಣ್ಯ ಸಂರಕ್ಷಣಾಧಿಕಖಾರಿ ಎನ್.ರವೀಂದ್ರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಣೇಶ್, ವಲಯ ಅರಣ್ಯ ಅಧಿಕಾರಿ ಶ್ರೀಧರ್ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.