ಆನೇಕಲ್: ತಾಲ್ಲೂಕಿನ ಮುಗಳೂರು ವೇಲ್ ಸ್ಟ್ರಿಂಗ್ ಕ್ರೀಡಾ ಅಕಾಡೆಮಿ ವತಿಯಿಂದ ಮಂಗಳವಾರ ಆಯೋಜಿಸಿದ್ದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಬೆಂಗಳೂರಿನ ರಮಣ್ ಫುಟ್‌ಬಾಲ್ ಅಸೋಸಿಯೇಷನ್ ಪ್ರಥಮ ಸ್ಥಾನ ಪಡೆಯಿತು. ಕೇರಳ ಚಾಲೆಂಜರ್ಸ್ ತಂಡ ಎರಡನೇ ಸ್ಥಾನ ಪಡೆದು ಬಹುಮಾನ ತನ್ನದಾಗಿಸಿಕೊಂಡಿತು. ಪಂದ್ಯಾವಳಿಯಲ್ಲಿ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕದಿಂದ 70ಕ್ಕೂ ಹೆಚ್ಚು ತಂಡಗಳು ಭಾಗಿಯಾಗಿದ್ದವು.
ಅಕಾಡೆಮಿ ಮುಖ್ಯಸ್ಥ ಪ್ರಸಾದ್ ರೆಡ್ಡಿ ಮಾತನಾಡಿ, ಕ್ರೀಡೆಯಿಂದಾಗಿ ಯುವಕರಲ್ಲಿ ದೈಹಿಕ ಮತ್ತು ಮಾನಸಿಕ ಶಕ್ತಿ ಹೆಚ್ಚಾಗಲಿದೆ. ಪೋಷಕರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಹಣ ಮೀಸಲಿಡುತ್ತಾರೆ. ಶೈಕ್ಷಣಿಕ ಚಟುವಟಿಕೆ ಜತೆಗೆ ಕ್ರೀಡಾ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕಾದ ಜವಾಬ್ದಾರಿ ಪೋಷಕರು ಮತ್ತು ಶಾಲೆಗಳ ಮೇಲಿರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ವೆಲ್ ಸ್ಪ್ರಿಂಗ್ ಅಕಾಡೆಮಿ ನಿರ್ದೇಶಕರಾದ ಅಕಿಲೇಶ್ವರ್ ರೆಡ್ಡಿ, ದಿನೇಶ್ ರೆಡ್ಡಿ, ಪ್ರಾಂಶುಪಾಲರಾದ ಮೋರಿನ್ ಚರ್ತುವೇದಿ, ಮೇಲ್ವಿಚಾರಕರಾದ ಭರತ್, ಶೇಖರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.