ಗೋಮಾಂಸ ಸಾಗಾಣಿಕೆ ಮಾಡುತ್ತಿದ್ದ ಕಾರಿಗೆ ಪ್ರವಾಸಿ ಮಂದಿರ ವೃತ್ತದಲ್ಲಿ ಬೆಂಕಿ ಹಚ್ಚಿರುವುದು
ದೊಡ್ಡಬಳ್ಳಾಪುರ: ಆಂಧ್ರಪ್ರದೇಶದ ಹಿಂದೂಪುರದಿಂದ ಬೆಂಗಳೂರಿಗೆ ಅಕ್ರಮವಾಗಿ ಗೋಮಾಂಸ ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ಶ್ರೀರಾಮಸೇನೆ ಸಂಘಟನೆ ಕಾರ್ಯಕರ್ತರು ನಗರದ ಪ್ರವಾಸಿ ಮಂದಿರ ವೃತ್ತದಲ್ಲಿ ತಡೆದು ಒಂದು ಕಾರಿಗೆ ಬೆಂಕಿ ಹಚ್ಚಿರುವ ಪ್ರಕರಣ ಭಾನುವಾರ ಬೆಳಿಗ್ಗೆ 5.30 ರ ಸುಮಾರಿಗೆ ನಡೆದಿದೆ.
ಘಟನೆಯಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಹೆಚ್ಚಿನ ಅನಾಹುತ ನಡೆಯದಂತೆ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
ಗೋಮಾಂಸ ಸಾಗಿಸುತ್ತಿದ್ದ ವಾಹನ ಚಾಲಕರ ತಲೆಯ ಮೇಲೆ ಗೋಮಾಂಸವನ್ನು ಇಟ್ಟು ಪ್ರವಾಸಿ ಮಂದಿರ ವೃತ್ತದಲ್ಲಿ ಮೆರವಣಿಗೆ ಮಾಡಲಾಗಿರುವ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಈ ಘಟನೆಯಿಂದ ಸ್ಥಳದಲ್ಲಿ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪುಗೂಡಿದ್ದ ಜನರನ್ನು ಚದುರಿಸಿದ್ದಾರೆ. ಘಟನ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.
ಗೋ ಮಾಂಸ ಸಾಗಾಣಿಕೆ ಮಾಡುತ್ತಿದ್ದ ಐದು ವಾಹನ ಹಾಗೂ ಚಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿದ್ದು ಎರಡೂ ಕಡೆಯ ಆರೋಪಿಗಳ ವಿರಚಾರ ನಡೆಸುತ್ತಿದ್ದಾರೆ.
ಗೋಮಾಂಸ ಸಾಗಾಣಿಕೆ ಮಾಡುತ್ತಿದ್ದ ವಾಹನ ಚಾಲಕರ ತಲೆಯ ಮೇಲೆ ಗೋಮಾಂಸ ಹೊರಿಸಿ ಮೆರವಣಿಗೆ ಮಾಡಿರುವುದು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.