ದೊಡ್ಡಬಳ್ಳಾಪುರ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ನೀಡಿದ್ದ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ದೊಡ್ಡಬಳ್ಳಾಪುರದಲ್ಲಿ ಭಾಸ್ಕರ್ ರಾವ್ ವಿರುದ್ಧ ಕಾನೂನು ಕ್ರಮ ಕ್ರಮಕೈಗೊಳ್ಳುವಂತೆ ಕಾಂಗ್ರೆಸ್ ಕಾನೂನು ಘಟಕದಿಂದ ಶನಿವಾರ ಗ್ರಾಮಾಂತರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸಾಧಿಕ್‌ಪಾಷ ಅವರಿಗೆ ದೂರು ನೀಡಲಾಗಿದೆ.
ರಾಜ್ಯ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಎಚ್.ಎನ್.ವಸಂತ್ ಕುಮಾರ್, ರಾಜ್ಯ ಕಾರ್ಯದರ್ಶಿ ಬಿ.ಸಿ.ನವೀನ್ ಕುಮಾರ್, ಬೆಂಗಳೂರು ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟೇಲ್, ಬೆಂಗಳೂರು ಗ್ರಾಮೀಣ ಜಿಲ್ಲಾ ಯುವ ಕಾಂಗ್ರೆಸ್ ಕಾನೂನು ವಿಭಾಗದ ಅಧ್ಯಕ್ಷ ಎಂ.ನವೀನ್ ಕುಮಾರ್, ಉಪಾಧ್ಯಕ್ಷ ಹರ್ಷ, ದೇವನಹಳ್ಳಿ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ.ಸಂದೀಪ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.