
ದೊಡ್ಡಬಳ್ಳಾಪುರ: ದೇವನಹಳ್ಳಿ-ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ವ್ಲೀಲೆ ಮಾಡುತ್ತಿದ್ದ ಇಬ್ಬರನ್ನು ಗ್ರಾಮಾಂತರ ಪೊಲೀಸರು ಬಂಧಿಸಿ, ಬೈಕ್‌ಗಳನ್ನು ವಶ ಪಡಿಸಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ ನಗರದ ವಸೀಂ ಪಾಷ(19), ಶುಕೂರ್ ಮಿಯಾ(20) ಬಂಧಿತರು.
ಬೈಕಿನ ನಂಬರ್ ಪ್ಲೇಟ್ ಕಳಚಿ ಗುಂಪು ಗುಂಪಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ನಲ್ಲಿ ವ್ಹೀಲೆ ಮಾಡುತ್ತಿದ್ದರು. ತಾಲ್ಲೂಕಿನ ನಾಗದೇನಹಳ್ಳಿ ಗ್ರಾಮದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ವ್ಹೀಲೆ ಮಾಡುವ ಮೂಲಕ ಉಳಿದ ಸವಾರರಿಗೆ ತೊಂದರೆ ನೀಡುತ್ತಿದ್ದರು. ಈ ದೃಶ್ಯವನ್ನು ಹಿಂದೆ ಬರುತ್ತಿದ್ದ ಬೈಕ್ ಸವಾರರು ವಿಡಿಯೊ ಮಾಡಿಕೊಂಡಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದರ ಜತೆ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಆಧಾರಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಯುವಕರಲ್ಲಿ ಬೈಕ್ ವ್ಹೀಲೆ ಕ್ರೇಜ್ ಹೆಚ್ಚಾಗುತ್ತಿದೆ. ಪೊಲೀಸರು ಎಷ್ಟೇ ಎಚ್ಚರಿಕೆ ನೀಡಿದರೂ, ಕಂಬಿ ಹಿಂದೆ ಕೂರಿಸಿದರೂ ವ್ಹೀಲೆ ಮಾಡುವುದನ್ನು ನಿಲ್ಲಿಸುತ್ತಿಲ್ಲ. ಪೋಷಕರು ಸಹ ಬೈಕ್‌ಗಳನ್ನು ತಮ್ಮ ಮಕ್ಕಳಿಗೆ ಕೊಡುವ ಮುನ್ನ ಬುದ್ದಿ ಮಾತು ಹೇಳಬೇಕು. ರಸ್ತೆಯಲ್ಲಿನ ಇತರೆ ವಾಹನ ಸವಾರರಿಗೆ ಸಮಸ್ಯೆಯಾಗಿ ಅಪಘಾತಗಳು ಸಂಭವಿಸುತ್ತಿವೆ’ ಎಂದು ಗ್ರಾಮಾಂತರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸಾಧೀಕ್ ಪಾಷ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.