ADVERTISEMENT

ಬನ್ನೇರುಘಟ್ಟ ಸಮೀಪದ ಮಂಟಪ ಕೆರೆಯಲ್ಲಿ ಪಕ್ಷಿಗಳ ಸಾವು

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2020, 15:00 IST
Last Updated 20 ಮಾರ್ಚ್ 2020, 15:00 IST
ಆನೇಕಲ್ ತಾಲ್ಲೂಕಿನ ಮಂಟಪ ಕೆರೆಯಲ್ಲಿ ಪಕ್ಷಿಗಳು ಸತ್ತಿರುವ ಹಿನ್ನೆಲೆಯಲ್ಲಿ ಕಂದಾಯ ಮತ್ತು ಪಶುವೈದ್ಯಕೀಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರಿಂದ ಮಾಹಿತಿ ಪಡೆದರು
ಆನೇಕಲ್ ತಾಲ್ಲೂಕಿನ ಮಂಟಪ ಕೆರೆಯಲ್ಲಿ ಪಕ್ಷಿಗಳು ಸತ್ತಿರುವ ಹಿನ್ನೆಲೆಯಲ್ಲಿ ಕಂದಾಯ ಮತ್ತು ಪಶುವೈದ್ಯಕೀಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರಿಂದ ಮಾಹಿತಿ ಪಡೆದರು   

ಆನೇಕಲ್ : ಬನ್ನೇರುಘಟ್ಟ ಸಮೀಪದ ಮಂಟಪ ಕೆರೆಯಲ್ಲಿ ಕಳೆದ ಎರಡು ದಿನಗಳಿಂದ ಹದ್ದು ಮತ್ತು ಕೊಕ್ಕರೆಗಳು ಸಾಯುತ್ತಿರುವ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಪಶು ವೈದ್ಯಕೀಯ ಆಸ್ಪತ್ರೆಯ ವೈದ್ಯರು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

‘ಮಂಟಪ ಕೆರೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಕೆಲವು ಹದ್ದುಗಳು ಮತ್ತು ಕೊಕ್ಕರೆಗಳು ಸತ್ತುಬಿದ್ದಿರುವುದನ್ನು ಗಮನಿಸಿದ ಗ್ರಾಮಸ್ಥರು ಈ ಬಗ್ಗೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಹಕ್ಕಿ ಜ್ವರದ ಹಿನ್ನೆಲೆಯಲ್ಲಿ ಪರಿಶೀಲಿಸುವ ಸಲುವಾಗಿ ಸ್ಥಳಕ್ಕೆ ಭೇಟಿ ನೀಡಲಾಗಿತ್ತು’ ಎಂದು ಕಂದಾಯ ನಿರೀಕ್ಷಕಿ ಚೈತ್ರಾ ತಿಳಿಸಿದರು.

ಬನ್ನೇರುಘಟ್ಟ ಪಶುವೈದ್ಯಕೀಯ ಆಸ್ಪತ್ರೆಯ ವೈದ್ಯ ಡಾ.ವಿಜಯ್‌ಕುಮಾರ್‌ ಮಾತನಾಡಿ, ‘ಕೆರೆಯ ನೀರಿನ ಮಾದರಿ ಹಾಗೂ ಸತ್ತ ಪಕ್ಷಿಗಳ ಮಾದರಿಯನ್ನು ಸಂಗ್ರಹಿಸಿದ್ದು ಹೆಚ್ಚಿನ ಪರೀಕ್ಷೆಗೆ ಒಳಪಡಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

ಹಕ್ಕಿ ಜ್ವರದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕಗೊಂಡಿದ್ದರು. ಹಾಗಾಗಿ ಪರೀಕ್ಷೆ ಮಾಡಿ ವರದಿ ಮಾಡಲಿ ಎಂಬ ದೃಷ್ಟಿಯಿಂದ ಅಧಿಕಾರಿಗಳನ್ನು ಕೋರಲಾಗಿತ್ತು. ಈ ಹಿನ್ನೆಲೆಯಲ್ಲಿ ಭೇಟಿ ನೀಡಿ ಮಾದರಿ ಸಂಗ್ರಹಿಸಲಾಗಿದೆ ಎಂದು ಪಶು ವೈದ್ಯಕೀಯ ಆಸ್ಪತ್ರೆಯ ವೈದ್ಯರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.