
ಆನೇಕಲ್: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ತಾಲ್ಲೂಕಿನ ಚಂದಾಪುರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಸಂಜೆ ವಿಜಯೋತ್ಸವ ಆಚರಿಸಿದರು.
ಚಂದಾಪುರ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಬಿಜೆಪಿ ಪರ ಘೋಷಣೆಗಳನ್ನು ಕೂಗಿದರು.
ಆನೇಕಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಎಸ್.ಆರ್.ಟಿ. ಅಶೋಕ್ ರೆಡ್ಡಿ ಮಾತನಾಡಿ, ಬಿಹಾರದ ಗೆಲುವು ಕರ್ನಾಟಕದ ಬಿಜೆಪಿ ಕಾರ್ಯಕರ್ತರಿಗೆ ಹುಮ್ಮಸ್ಸು ನೀಡಿದೆ. ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಶ್ರಮಿಸಿದರೆ ಭರ್ಜರಿ ಗೆಲುವು ದಾಖಲಿಸಬಹುದು ಎಂಬುದನ್ನು ಬಿಹಾರ ಫಲಿತಾಂಶ ಸಾಬೀತುಪಡಿಸಿದೆ. 2028ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಹಾರ ಚುನಾವಣೆ ದಿಕ್ಸೂಚಿಯಾಗಿದ್ದು, ಮುಂಬರುವ ತಾಲ್ಲೂಕು, ಜಿಲ್ಲಾ, ಗ್ರಾಮ ಪಂಚಾಯಿತಿ ಮತ್ತು ಗ್ರೇಟರ್ ಬೆಂಗಳೂರು ಚುನಾವಣೆಗಳಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದರು.
ಬಿಜೆಪಿಯ ಆನೇಕಲ್ ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಮುರಳಿ ಮೋಹನ್ ರೆಡ್ಡಿ, ಮುರಳಿ ಕೃಷ್ಣ, ವರದರಾಜು, ಕೃಷ್ಣಾರೆಡ್ಡಿ ರಮೇಶ್ ರೆಡ್ಡಿ, ನ್ಯಾತರಡ್ಡಿ, ನಂಜಾರೆಡ್ಡಿ, ಮುರುಳಿ, ಮಂಜುನಾಥ್, ವೆಂಕಟಸ್ವಾಮಿ, ಅನಿಲ್, ಬಸವರಾಜು, ರಮೇಶ್, ಚಂದ್ರು, ವಿಶ್ವನಾಥ್, ನಾಗರಾಜ್, ಬಾಬುರೆಡ್ಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.