ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ರಕ್ತದಾನ ಶಿಬಿರ ನಡೆಯಿತು
ವಿಜಯಪುರ (ದೇವನಹಳ್ಳಿ): ಬಿಜೆಪಿ ದೇವನಹಳ್ಳಿ ಮಂಡಲ, ವಿಜಯಪುರ ಪಟ್ಟಣ ಹಾಗೂ ಯುವ ಮೋರ್ಚಾದಿಂದ ನಡೆದ ರಕ್ತದಾನ ಶಿಬಿರದಲ್ಲ130 ಯೂನಿಟ್ ರಕ್ತ ಸಂಗ್ರಹಿಸಲಾಯಿತು.
ರಕ್ತದಾನಿಗಳಿಗೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಅಂಬರೀಶ್ ಗೌಡ ಅವರು ಪ್ರಮಾಣ ಪತ್ರ ವಿತರಿಸಿ ಬಳಿಕ ಮಾತನಾಡ, ಪ್ರಪಂಚದಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿದೆ. ಪಕ್ಷದಿಂದ ಸೇವಾ ಪಾಕ್ಷಿಕ ಹೆಸರಿನಲ್ಲಿ ರಕ್ತದಾನ ಶಿಬಿರ, ಆರೋಗ್ಯ ಶಿಬಿರ ಸೇರಿದಂತೆ ಅನೇಕ ಸಾಮಾಜಿಕ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಕಸಾಪ ತಾಲ್ಲೂಕು ಅಧ್ಯಕ್ಷ ನಂಜೇಗೌಡ ಮಾತನಾಡಿದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬುಳ್ಳಹಳ್ಳಿ ರಾಜಪ್ಪ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ತಾಲೂಕು ಕಾರ್ಯದರ್ಶಿ ರವಿಕುಮಾರ್, ಟೌನ್ ಬಿಜೆಪಿ ಮಾಜಿ ಅಧ್ಯಕ್ಷ ರಾಮು ಭಗವಾನ್, ಪುರಸಭಾ ಮಾಜಿ ಸದಸ್ಯ ವರದರಾಜು, ಮಹಿಳಾ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷೆ ಸುನೀತ, ಮಹಿಳಾ ಮೋರ್ಚಾ ತಾಲ್ಲೂಕು ಅಧ್ಯಕ್ಷೆ ವಿಜಯಮ್ಮ, ಸಂಕಲ್ಪ ರಕ್ತದಾನ ಕೇಂದ್ರದ ಡಾ.ಮುಕುಲ್ ಡಾ.ಉದಯ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.