ಹೊಸಕೋಟೆ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಶರತ್ ಬಚ್ಚೇಗೌಡ
ಹೊಸಕೋಟೆ: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಪೇಂದ್ರರೆಡ್ಡಿ ಅವರಿಗೆ ಸೋಲಾಗಿದ್ದು, ರಾಜ್ಯದಲ್ಲಿ ಚುನಾವಣೆಗಳಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿಯೂ ಫಲಿಸುವುದಿಲ್ಲ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಮಾತನಾಡಿ, ಕಾಂಗ್ರೆಸ್ ಶಾಸಕರ ಒಗ್ಗಟ್ಟಿನ ಫಲವಾಗಿ ಮೂರು ಅಭ್ಯರ್ಥಿಗಳು ಪಕ್ಷದಿಂದ ಆಯ್ಕೆಯಾಗಿದ್ದಾರೆ. ಇದು ಲೋಕಸಭೆ ಚುನಾವಣೆಗೆ ಮುನ್ನುಡಿಯಾಗಿದ್ದು, ಪಕ್ಷದ ಮೇಲಿನ ವಿಶ್ವಾಸನವನ್ನು ಕಾಂಗ್ರೆಸ್ ಶಾಸಕರು ಎಂದಿಗೂ ಕಳೆದುಕೊಳ್ಳುವುದಿಲ್ಲ ಎಂದರು.
ನಗರಸಭೆಯ ಎಲ್ಲಾ ವಾರ್ಡ್‌ಗಳಲ್ಲಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಅನುದಾನ ನೀಡಿ ಅಭಿವೃದ್ಧಿ ಕೆಲಸ ಮಾಡಲಾಗುವುದು. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಬೇಕು. ಕಾಮಗಾರಿಯನ್ನು ವಿಳಂಬ ಮಾಡಬಾರದು ಎಂದು ಎಚ್ಚರಿಕೆ ನೀಡಿದರು.
ಬಿ.ವಿ. ಬೈರೇಗೌಡ, ಎಚ್.ಎಂ.ಸುಬ್ಬರಾಜ್, ಡಿ.ಸಿ.ನಾಗರಾಜ್, ನಿಸಾರ್ ಅಹಮ್ಮದ್, ಹರೀಶ್ ಗೌಡ, ಮೋಹನ್ ಬಾಬು, ಕುಮಾರ್, ಸವಿತಾ ಶ್ರೀನಿವಾಸ್, ಪುಷ್ಮಮ್ಮ, ಸಾವಿತ್ರಿ, ಪವಿತ್ರ, ಗುತ್ತಿಗೆದಾರ ಈರಣ್ಣ, ತಗ್ಲಿ ನಾರಾಯಣಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.