ADVERTISEMENT

ಬೆಂಗಳೂರು ಗ್ರಾಮಾಂತರ: ರಕ್ತದಾನ ಶಿಬಿರ

​ಪ್ರಜಾವಾಣಿ ವಾರ್ತೆ
Published 13 ಮೇ 2020, 12:32 IST
Last Updated 13 ಮೇ 2020, 12:32 IST

ಹೊಸಕೋಟೆ: ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತನಿಧಿ ಮತ್ತು ಹೊಸಕೋಟೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಯುಕ್ತ ಆಶ್ರಯದಲ್ಲಿ ಮೇ 5ರಂದು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ನಗರದ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಶಿಬಿರವಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಕ್ತದಾನಿಗಳು ಸರ್ಕಾರದ ಕೋವಿಡ್ 19 ಎಲ್ಲಾ ನಿಯಮಗಳನ್ನು ಪಾಲಿಸಿಕೊಂಡು ಬರಬೇಕು ಮತ್ತು ಬರುವವರು ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಸಿಕೊಂಡು ಬರಬೇಕು ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. 98868 42756, 80506 64872 ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT