
ಆನೇಕಲ್-ಅತ್ತಿಬೆಲೆ ರಸ್ತೆ ಹಾಲ್ದೇನಹಳ್ಳಿ ರೈಲ್ವೆ ಗೇಟ್‌ನಲ್ಲಿ ಕೆಟ್ಟು ನಿಂತ ಬಿಎಂಟಿಸಿ ಬಸ್
ಆನೇಕಲ್: ಅತ್ತಿಬೆಲೆ-ಆನೇಕಲ್ ಮುಖ್ಯರಸ್ತೆ ಹಾಲ್ದೇನಹಳ್ಳಿ ರೈಲ್ವೆ ಗೇಟ್ ಬಳಿ ಬಿಎಂಟಿಸಿ ಬಸ್ಸೊಂದು ಕೆಟ್ಟು ನಿಂತಿದ್ದರಿಂದ ಕೆಲಕಾಲ ಆತಂಕ ಉಂಟಾಗಿತ್ತು. ಸ್ಥಳೀಯರು ಮತ್ತು ವಾಹನ ಸವಾರರು ಬಸ್ ಅನ್ನು ತಳ್ಳಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.
ಅತ್ತಿಬೆಲೆಯಿಂದ ಆನೇಕಲ್‌ಗೆ ಹೋಗುತ್ತಿದ್ದ ಬಿಎಂಟಿಸಿ ಬಸ್ ಕೆಟ್ಟು ನಿಂತಿತು. ಇದರಿಂದಾಗಿ ಆನೇಕಲ್, ದಿನ್ನೂರು, ಅತ್ತಿಬೆಲೆ, ಕರ್ಪೂರುವರೆಗೂ ಸುಮಾರು 2 ಕಿ.ಮೀ.ಗೂ ಹೆಚ್ಚು ದೂರ ವಾಹನ ದಟ್ಟಣೆ ಉಂಟಾಗಿತ್ತು. ಬೈಕ್ ಮತ್ತು ಕಾರುಗಳು ನಿಂತಲ್ಲೇ 40 ನಿಮಿಷಕ್ಕೂ ಹೆಚ್ಚು ಕಾಲ ನಿಂತಿದ್ದವು. ರೈಲ್ವೆ ಗೇಟ್ ಸಮಸ್ಯೆಯಿಂದ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದ ದೃಶ್ಯ ಕಂಡುಬಂದಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.