
ದೇವನಹಳ್ಳಿ: ಪಟ್ಟಣದ ಕೋಟೆ ಪಕ್ಕದಲ್ಲಿರುವ ಸಿಹಿ ನೀರಿನ ಕೆರೆಯಲ್ಲಿ ಪುರಸಭೆ ಆರಂಭಿಸಿರುವ ದೋಣಿ ವಿಹಾರಕ್ಕೆ ಬುಧವಾರ ದೋಣಿ ವಿಹಾರದಲ್ಲಿ ಸಾಗುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ ನೀಡಿದರು.
ಕೆರೆ ಪ್ರದೇಶಗಳಲ್ಲಿ ಜಲ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಬೋಟಿಂಗ್ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಸುರಕ್ಷತೆ ದೃಷ್ಟಿಯಿಂದ ಪ್ರತಿಯೊಬ್ಬರು ದೋಣಿ ವಿಹಾರ ಮಾಡುವಾಗ ಲೈಫ್ ಜಾಕೆಟ್ ಹಾಕಿಕೊಳ್ಳುವುದು ಕಡ್ಡಾಯ ಎಂದು ತಿಳಿಸಿದರು.
ಜಲಕ್ರೀಡೆಗಳಲ್ಲಿ ಭಾಗವಹಿಸುವ ಮುನ್ನಾ ಮುಂಜಾಗ್ರತಾ ಕ್ರಮಗಳನ್ನು ಇದರ ಉಸ್ತುವಾರಿ ನೋಡಿಕೊಳ್ಳುವ ಸಿಬ್ಬಂದಿ ಪರಿಶೀಲಿಸಿಕೊಳ್ಳಬೇಕು. ಯಾವುದೇ ಅವಘಡ ಸಂಭವಿಸದಂತೆ ಎಚ್ಚರಿಕೆ ವಹಿಸಿ ಎಂದರು.
ದೋಣಿ ವಿಹಾರ ಪ್ರಾರಂಭದಿಂದಾಗಿ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರೆತಂದಾಗಿದೆ. ಕೆರೆಯೂ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಇದ್ದು, ಅನೇಕ ಪ್ರವಾಸಿಗರು ದೇವನಹಳ್ಳಿ ಕೋಟೆ, ಶ್ರೀ ವೇಣುಗೋಪಾಲ ಸ್ವಾಮಿ ದೇಗುವ ವೀಕ್ಷಣೆಗೆ ಬರುತ್ತಾರೆ. ಬೋಟಿಂಗ್‌ನಿಂದಾಗಿ ಮಕ್ಕಳಿಗೆ ಜಲಕ್ರೀಡೆಯ ಬಗ್ಗೆ ಆಸಕ್ತಿ ಮೂಡುತ್ತದೆ ಎಂದು ತಿಳಿಸಿದರು.
ಬಯಪ ಅಧ್ಯಕ್ಷ ಶಾಂತಕುಮಾರ್, ಪುರಸಭೆ ಅಧ್ಯಕ್ಷ ಮುನಿಕೃಷ್ಣ, ಉಪಾಧ್ಯಕ್ಷ ರವೀಂದ್ರ, ತಾಲ್ಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಜಗನ್ನಾಥ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ ಮಂಜುನಾಥ್, ತಹಶೀಲ್ದಾರ್ ಅನಿಲ್, ಪುರಸಭೆ ಮುಖ್ಯಾಧಿಕಾರಿ ಶಿವಮೂರ್ತಿ, ಪುರಸಭೆ ಸದ್ಯರಾದ ನಾಗೇಶ್, ರಘು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.