ADVERTISEMENT

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

​ಪ್ರಜಾವಾಣಿ ವಾರ್ತೆ
Published 16 ಜೂನ್ 2025, 14:44 IST
Last Updated 16 ಜೂನ್ 2025, 14:44 IST
ಚಿಕ್ಕಣ್ಣ
ಚಿಕ್ಕಣ್ಣ   

ದೊಡ್ಡಬಳ್ಳಾಪುರ: ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯ ಶವ ಕೆರೆಯಲ್ಲಿ ಪತ್ತೆಯಾಗಿರುವ ಪ್ರಕರಣ ತಾಲ್ಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತನನ್ನು ಜೋಡಿಕಾರೇಪುರದ (ತಾಡಿಪಾಳ್ಯ) ಚಿಕ್ಕಣ್ಣ(35) ಎಂದು ಗುರುತಿಸಲಾಗಿದೆ. ಜೂನ್‌ 14 ರಂದು ಚಿಕ್ಕಣ್ಣ ಮನೆಯಿಂದ ಹೊರಗೆ ಹೋಗಿದ್ದು, ಗ್ರಾಮದ ಕೆರೆ ಬಳಿ ತೆರಳಿದ್ದು, ಕಾಲು ಜಾರಿ ಬಿದ್ದರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಸೋಮವಾರ ಕೆರೆಯಲ್ಲಿ ಮೃತ ದೇಹ ಕಂಡು ಬಂದಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ದೇಹವನ್ನು ಕೆರೆಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ನೀಡಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.