ದೊಡ್ಡಬಳ್ಳಾಪುರ: ತಾಲ್ಲೂಕಿನ ಕೊನೇನಹಳ್ಳಿ ಹೊರ ವಲಯದಲ್ಲಿ ಹಾದು ಹೋಗಿರುವ ಪವರ್ ಗ್ರೀಡ್ ವಿದ್ಯುತ್ ಕಂಬದಲ್ಲಿ ಯುವಕನ ಶವ ಪತ್ತೆಯಾಗಿದ್ದು, ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಂಗಳಾಪುರ ಗ್ರಾಮದ ಕೆ.ಆರ್.ಅಮೃತ್ ಮೃತ ಯುವಕ. ಅನುಮಾನಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದೆ ಎಂದು ಪೋಷಕರು ದೂರು ನೀಡಿದ್ದಾರೆ.
ಘಟನಾ ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಇನ್ ಸ್ಪೆಕ್ಟರ್ ಹರೀಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.