ADVERTISEMENT

28ರಿಂದ ಬ್ರಾಹ್ಮಣ ಮಹಾಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2019, 13:17 IST
Last Updated 12 ಡಿಸೆಂಬರ್ 2019, 13:17 IST
ಹೊಸಕೋಟೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ 2020ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಎಸ್.ಎಸ್. ಲಕ್ಷ್ಮೀಶ, ಸಮಾಜದ ಮುಖಂಡರು ಇದ್ದರು
ಹೊಸಕೋಟೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ 2020ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಎಸ್.ಎಸ್. ಲಕ್ಷ್ಮೀಶ, ಸಮಾಜದ ಮುಖಂಡರು ಇದ್ದರು   

ಹೊಸಕೋಟೆ: ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕೋಟೇಶ್ವರದಲ್ಲಿ ಡಿಸೆಂಬರ್ 28 ಮತ್ತು 29 ರಂದು 10ನೇ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಮ್ಮೇಳನ ನಡೆಯಲಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಸ್.ಎಸ್. ಲಕ್ಷ್ಮೀಶ ಅವರು ತಿಳಿಸಿದರು.

ನಗರದ ಶ್ರೀ ರಾಘವೇಂದ್ರ ಸ್ವಾಮಿ ದೇವಾಲಯದಲ್ಲಿ ಮಹಾಸಭಾದ 2020ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ವರ್ಷವೂ ಮಹಾಸಭಾದ ಕ್ಯಾಲೆಂಡರ್ ಹೊರತರುತ್ತಿದ್ದು ತಾಲ್ಲೂಕಿನ ಎಲ್ಲ ವಿಪ್ರರ ಮನೆಗೆ ಇದನ್ನು ಉಚಿತವಾಗಿ ವಿತರಿಸಲಾಗುತ್ತದೆ ಎಂದರು.

ADVERTISEMENT

ಸಮ್ಮೇಳನಕ್ಕೆ ತಾಲ್ಲೂಕಿನಿಂದ ಅತಿ ಹೆಚ್ಚು ಸಂಖ್ಯೆಯನ್ನು ಕರೆದುಕೊಂಡು ಹೋಗಲಾಗುವುದು. ಅದಕ್ಕಾಗಿ ತಾಲ್ಲೂಕಿನ ಎಲ್ಲಾ ವಿಪ್ರಭಾಂದವರನ್ನು ಸಂಪರ್ಕಿಸಲಾಗುತ್ತಿದೆ ಎಂದು ತಿಳಿಸಿದರು.

ಸಮ್ಮೇಳನದಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆಯಿದೆ. ಬ್ರಾಹ್ಮಣ ಸಮಾಜದ ಪ್ರಮುಖರಾದ, ಕೆಂದ್ರ ಸಚಿವರಾದ ಪ್ರಹ್ಲಾದ ಜೋಶಿ, ರಾಜ್ಯದ ಸಚಿವ ಸುರೇಶ್ ಕುಮಾರ್, ಕಾಂಗ್ರೆಸ್‌ನ ಆರ್.ವಿ. ದೇಶಪಾಂಡೆ, ದಿನೇಶ್ ಗುಂಡುರಾವ್, ಜೆಡಿಎಸ್‌ನ ಆರ್.ವಿ. ದತ್ತ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ತಾಲ್ಲೂಕಿನ ವಿಪ್ರ ಸಮಾಜದ ಪ್ರಮುಖರಾದ ಲಕ್ಷ್ಮೀಕಾಂತ್, ಫಣಿರಾಜ್, ಆನಂದ್, ಮುರುಳಿಕೃಷ್ಣ, ಗುರುಪ್ರಸಾದ್, ಕೆ. ಮಂಜುನಾಥ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.