ಆನೇಕಲ್ : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಘಟಕದ ಉಪಾಧ್ಯಕ್ಷರಾಗಿ ತಾಲ್ಲೂಕಿನ ಬಿದರಗುಪ್ಪೆ ಅಚ್ಯುತಮೂರ್ತಿ ಅವರನ್ನು ಮಹಾಸಭಾ ಅಧ್ಯಕ್ಷ ಎಸ್.ರಘುನಾಥ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಬಿದರಗುಪ್ಪೆ ಅಚ್ಯುತಮೂರ್ತಿ ಅವರು ಲಕ್ಷ್ಮೀನಾರಾಯಣ ವೇದಪಾಠ ಶಾಲೆ ಪ್ರಾಚಾರ್ಯರಾಗಿ ಕೆಲಸ ಮಾಡಿದ್ದಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತ ಪರಿಷತ್‌ನ ರಾಜ್ಯ ಪ್ರಧಾನ ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದ ಹಿನ್ನೆಲೆಯಲ್ಲಿ ಅವರನ್ನು ಮಹಾಸಭಾ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.