ADVERTISEMENT

ದೊಡ್ಡಬಳ್ಳಾಪುರ ಟಿಎಪಿಎಂಸಿಎಸ್‌ ಚುನಾವಣೆ: ಕಾಂಗ್ರೆಸ್ ಬೆಂಬಲಿತರಿಗೆ ಬಹುಮತ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2025, 15:41 IST
Last Updated 2 ನವೆಂಬರ್ 2025, 15:41 IST
<div class="paragraphs"><p>ದೊಡ್ಡಬಳ್ಳಾಪುರ ಟಿಎಪಿಎಂಸಿಎಸ್‌ ಮತಗಳ ಎಣಿಕೆಯಲ್ಲಿ ನಿರತ ಚುನಾವಣಾ ಸಿಬ್ಬಂದಿ</p></div>

ದೊಡ್ಡಬಳ್ಳಾಪುರ ಟಿಎಪಿಎಂಸಿಎಸ್‌ ಮತಗಳ ಎಣಿಕೆಯಲ್ಲಿ ನಿರತ ಚುನಾವಣಾ ಸಿಬ್ಬಂದಿ

   

ದೊಡ್ಡಬಳ್ಳಾಪುರ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ(ಟಿಎಪಿಎಂಸಿಎಸ್) ಭಾನುವಾರ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಸ್ಪಷ್ಟ ಬಹುಮತ ಪಡೆದಿದ್ದೆದಾರೆ. ಬಿಜೆಪಿ–ಜೆಡಿಎಸ್ ಮೈತ್ರಿಗೆ ತೀವ್ರ ಮುಖಂಭಂಗವಾಗಿದೆ.

ಚುನಾವಣೆಯಲ್ಲಿ ಶೇ93.98ರಷ್ಟು ಮತದಾನ ನಡೆದಿದೆ. ‘ಬಿ’ ತರಗತಿಯಿಂದ ಜೆಡಿಎಸ್‌, ಬಿಜೆಪಿ ಮೈತ್ರಿ ಬೆಂಬಲಿತ ಐವರು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಕಾಂಗ್ರೆಸ್‌ ಬೆಂಬಲಿತ ಮೂವರು ಅಭ್ಯರ್ಥಿಗಳು ಮಾತ್ರ ಆಯ್ಕೆಯಾಗಿದ್ದಾರೆ. ‘ಎ’ ತರಗತಿಯ ಫಲಿತಾಂಶ ನ್ಯಾಯಾಲಯ ಆದೇಶದ ನಂತರ ಪ್ರಕಟಿಸುವುದಾಗಿ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಅಭ್ಯರ್ಥಿಗಳು ಪಡೆದಿರುವ ಮತಗಳ ಆಧಾರದಲ್ಲಿ ಕಾಂಗ್ರೆಸ್‌ ಬೆಂಬಲಿತ ನಾಲ್ಕು ಅಭ್ಯರ್ಥಿಗಳು ಹಾಗೂ ಒಬ್ಬರು ಮೈತ್ರಿ ಆಭ್ಯರ್ಥಿ ಆಯ್ಕೆಯಾಗಿದ್ದಾರೆ.

ADVERTISEMENT

ಮತ ವಿವರ

ಬೆಳಗ್ಗೆ 9 ಗಂಟೆಗೆ ಆರಂಭವಾದ ಮತದಾನ ಸಂಜೆ 4 ಗಂಟೆಗೆ ಮುಕ್ತಾಯವಾಗುವವರೆಗೂ ರೈತರು ಉತ್ಸಾಹದಿಂದಲೇ ಮತ ಚಲಾಯಿಸಿದರು. ಮತದಾರರ ಪಟ್ಟಿಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ನಿರ್ವಹಣೆ ಮಾಡುವ ಸಲುವಾಗಿಯೇ 20 ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಇದರಿಂದ ಯಾವುದೇ ಗೊಂದಲ ಉಂಟಾಗಲಿಲ್ಲ. ಮತ ಚಲಾವಣೆಗೆ ಕಾದು ನಿಲ್ಲುವುದನ್ನು ತಪ್ಪಿಸಲು 12 ಕೊಠಡಿಗಳಲ್ಲಿ ಮತ ಚಲಾವಣೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಪ್ರತಿ ಕೊಠಡಿಯಲ್ಲೂ ಏಕ ಕಾಲಕ್ಕೆ ಎಂಟು ಜನರು ಪ್ರತ್ಯೇಕವಾಗಿ ಮತಪತ್ರಗಳ ಮೂಲಕ ಗುಪ್ತ ಮತದಾನ ಮಾಡಿದರು. ಸಂಜೆ 4 ಗಂಟೆಯ ನಂತರ ಮತಗಳ ಎಣಿಕೆ ಆರಂಭಿಸಲಾಯಿತು. 

ಮತದಾನ ನಡೆದ ಸರ್ಕಾರಿ ಕಾಲೇಜಿನ ಸುತ್ತ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಪೆಂಡಾಲ್‌ಗಳನ್ನು ಹಾಕಿಕೊಂಡು ಮತಯಾಚನೆ ನಡೆಸಿದರು. ಟಿಎಪಿಎಂಸಿಎಸ್‌ ಇತಿಹಾಸದಲ್ಲೇ ಇದೇ ಪ್ರಥಮ ಬಾರಿಗೆ ವಿಧಾನಸಭಾ ಚುನಾವಣಾ ಮಾದರಿಯಲ್ಲಿ ಚುನಾಯಿತ ಜನಪ್ರತಿನಿಧಿಗಳು ಸೇರಿದಂತೆ ಎಲ್ಲಾ ಪಕ್ಷಗಳ ಮುಖಂಡರು ಮತಗಟ್ಟೆ ಸಮೀಪವೇ ಇದ್ದು ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದರು. ಮಧ್ಯಾಹ್ನ ಎಲ್ಲಾ ರಾಜಕೀಯ ಪಕ್ಷಗಳವರು ಮತದಾರರಿಗೆ ಊಟದ ವ್ಯವಸ್ಥೆ ಮಾಡಿದ್ದರು.

‘ಎ’ತರಗತಿ ಫಲಿತಾಂಶಕ್ಕೆ ತಡೆ:
ತಾಲ್ಲೂಕಿನ 20 ವಿಎಸ್‌ಎಸ್‌ಎನ್‌ಗಳ ಪ್ರತಿನಿಧಿಗಳಾಗಿ ಐವರು ನಿರ್ದೆಶಕ ಸ್ಥಾನಕ್ಕೆ 9 ಮಂದಿ ಸ್ಪರ್ಧಿಸಿದ್ದರು. 2 ವಿಎಸ್‌ಎಸ್‌ಎನ್‌ಗಳ ಪ್ರತಿನಿಧಿಗಳು ಹೈಕೋರ್ಟ್‌ ಮೂಲಕ ಮತಚಲಾಯಿಸುವ ಹಕ್ಕು ಪಡೆದು ಭಾನುವಾರ ಮತಚಾಲಾಯಿಸಿದ್ದರು. ಸೋಮವಾರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಇದ್ದು, ನ್ಯಾಯಾಲಯದ ತೀರ್ಪಿನ ನಂತರ ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾಗಿದೆ.
ದೊಡ್ಡಬಳ್ಳಾಪುರ ಟಿಎಪಿಎಂಸಿಎಸ್‌ ಚುನಾವಣೆಯಲ್ಲಿ ಮತ ಚಲಾಯಿಸಲು ಸಾಲಿನಲ್ಲಿ ನಿಂತಿರುವ ಮತದಾರರು
ದೊಡ್ಡಬಳ್ಳಾಪುರ ಟಿಎಪಿಎಂಸಿಎಸ್‌ ಮತದಾನ ಕೇಂದ್ರದ ಮುಂದೆ ಸೇರಿದ್ದ ಜನ
ದೊಡ್ಡಬಳ್ಳಾಪುರದ ಟಿಎಪಿಎಂಸಿಎಸ್‌ ಲೋಗೋ