
ಪ್ರಜಾವಾಣಿ ವಾರ್ತೆ
ದೊಡ್ಡಬಳ್ಳಾಪುರ: ಮುತ್ತೂರಿನ 6ನೇ ವಾರ್ಡ್‌ನಲ್ಲಿ ಶುಕ್ರವಾರ ಮೂರು ಅಂತಸ್ತಿನ ಕಟ್ಟಡದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಸೋಮಶೇಖರ್(50) ಮೃತರು. ಮುತ್ತೂರಿನ 6ನೇ ವಾರ್ಡ್‌ನಲ್ಲಿ ಮೂರು ಅಂತಸ್ತಿನ ಮನೆಯೊಂದರಲ್ಲಿ ಬಾಡಿಗೆಗೆ ಕುಟುಂವದೊಂದಿಗೆ ವಾಸವಿದ್ದ ಸೋಮಶೇಖರ್ ಬೆಳಿಗ್ಗೆ ಮನೆಯ ಮೇಲಿನ ನೀರಿನ ಟ್ಯಾಂಕ್ ವಾಲ್ವ್ ದುರಸ್ತಿ ಮಾಡಲು ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.