ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಹೊಸಹಳ್ಳಿ ನಡುವಿನ ಗ್ರೀನ್ ವ್ಯಾಲಿ ಸಮೀಪ ಗುರುವಾರ ಸಂಜೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಕಾರ್ಖಾನೆಯ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿ ಹೊಡೆದಿದೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ.
ದೊಡ್ಡಬಳ್ಳಾಪುರದಿಂದ ಗೌರಿಬಿದನೂರಿಗೆ ಹೊಸಹಳ್ಳಿ ಮಾರ್ಗವಾಗಿ ಬಸ್ ಹೊರಟಿತ್ತು. ಬೇರೊಂದು ವಾಹನವನ್ನು ಹಿಂದಿಕ್ಕುವ ಭರದಲ್ಲಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿ ಹೊಡೆಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಈ ಮಾರ್ಗವಾಗಿ ಹೊರಟಿದ್ದ ಇತರ ವಾಹನಗಳ ಸವಾರರು ಬಸ್ಸಿನ ಗಾಜು ಒಡೆದು ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ಕರೆ ತಂದರು. ಬಸ್‌ನಲ್ಲಿದ್ದ ಕಾರ್ಮಿಕರನ್ನು ಬೇರೆ ವಾಹನದ ಮೂಲಕ ಕಳುಹಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.