ADVERTISEMENT

ಉಪಚುನಾವಣೆ: ನ.11ರಿಂದ ನೀತಿಸಂಹಿತೆ ಜಾರಿ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2019, 17:30 IST
Last Updated 9 ನವೆಂಬರ್ 2019, 17:30 IST

ದೇವನಹಳ್ಳಿ: ‘ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ನ. 11ರಿಂದ ಗ್ರಾಮಾಂತರ ಜಿಲ್ಲೆಯಾದ್ಯಂತ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ’ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

‘ಡಿ. 5ರಂದು ಚುನಾವಣೆ ನಡೆಯಲಿದ್ದು ನ. 11ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ನ. 18ರಂದು ನಾಮ ಪತ್ರ ಸಲ್ಲಿಕೆಗೆ ಅಂತಿಮ ದಿನ. 19ರಂದು ನಾಮಪತ್ರ ಪರಿಶೀಲನೆ. 21 ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಡಿ. 5ರಂದು ಮತದಾನ ಹಾಘೂ 9 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದ್ದು ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ’ ಎಂದು ತಿಳಿಸಿದ್ದಾರೆ.

‘2019 ಜ. 1ರ ಅರ್ಹತಾ ದಿನಾಂಕ ಅನ್ವಯ ಈಗಾಗಲೇ ಪ್ರಕಟಿಸಲಾಗಿರುವ ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಳಸಲಾದ ಮತದಾರರ ಪಟ್ಟಿಗಳ ಆಧಾರದಲ್ಲಿ ಉಪಚುನಾವಣೆ ನಡೆಯಲಿದೆ. ಹೊಸಕೋಟೆ ಮಿನಿ ವಿಧಾನಸೌಧ ಕಟ್ಟಡದಲ್ಲಿರುವ ತಾಲ್ಲೂಕು ಕಚೇರಿಯು ಜಿಲ್ಲಾ ಚುನಾವಣಾಧಿಕಾರಿಯವರ ಕೇಂದ್ರ ಕಚೇರಿ ಕಾರ್ಯ ಸ್ಥಳವಾಗಿದೆ. ಚುನಾವಣೆಯ ಪ್ರತಿಯೊಂದು ಪ್ರಕ್ರಿಯೆ ಇದೇ ಕಚೇರಿಯಲ್ಲಿ ನಡೆಯಲಿದೆ’ ಎಂದು ಅವರು ತಿಳಿಸಿದ್ದಾರೆ.

ADVERTISEMENT

‘ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,12,748 ಮತದಾರರಿದ್ದು ಈ ಪೈಕಿ 1,07,766 ಪುರುಷರು, 1,04,956 ಮಹಿಳೆಯರು ಮತ್ತು 26 ಇತರ ಮತದಾರರಿದ್ದಾರೆ. ಬಿಇಎಲ್ ಸಂಸ್ಥೆಯ ಎಂ.3 ಮಾದರಿಯ ಎವಿಎಂಗಳನ್ನು ಉಪಚುನಾವಣೆಯಲ್ಲಿ ಬಳಕೆ ಮಾಡಲಾಗುತ್ತದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.