ADVERTISEMENT

ಸೂಲಿಬೆಲೆ: ವಾರದ ಸಂತೆ ರದ್ದು

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2021, 4:44 IST
Last Updated 23 ಏಪ್ರಿಲ್ 2021, 4:44 IST
ಸೂಲಿಬೆಲೆ ಗ್ರಾಮ ಪಂಚಾಯಿತಿ
ಸೂಲಿಬೆಲೆ ಗ್ರಾಮ ಪಂಚಾಯಿತಿ   

ಸೂಲಿಬೆಲೆ: ಕೊರೊನಾ ಸಾಂಕ್ರಾಮಿಕ ರೋಗ ತೀವ್ರ ಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶ
ದಂತೆ, ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಿಗ್ಗೆ 6ರವರೆಗೆ ವಾರಾಂತ್ಯದ ಬಂದ್‌ ಜಾರಿಗೊಳಿಸಲಾಗಿದೆ ಎಂದು ಸೂಲಿಬೆಲೆ ಗ್ರಾಮ ಪಂಚಾಯಿತಿ ಪಿಡಿಒ ಸುಂದರ್ ತಿಳಿಸಿದರು.

ಶನಿವಾರ ಮತ್ತು ಭಾನುವಾರ ಬೆಳಿಗ್ಗೆ 6ರಿಂದ 10 ಗಂಟೆವರೆಗೆ ದಿನಸಿ ಮತ್ತು ತರಕಾರಿ ಅಂಗಡಿಗಳು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯದಲ್ಲಿ ಆಸ್ಪತ್ರೆ ಮತ್ತು ಮೆಡಿಕಲ್ ಶಾಪ್ ಹೊರತು ಪಡಿಸಿ, ಯಾವುದೇ ಅಂಗಡಿಗಳನ್ನು ತೆರೆಯುವಂತಿಲ್ಲ. ಅಂಗಡಿ ಮಾಲಿಕರು ವ್ಯಕ್ತಿಗತ ಅಂತರ ಕಾಪಾಡಲು ಅಂಗಡಿಗಳ ಎದುರು 2 ಮೀ ಅಂತರದಲ್ಲಿ ಗುರುತು ಹಾಕಬೇಕು. ಮಾಸ್ಕ್ ಧರಿಸಬೇಕು ಸರ್ಕಾರ ಸೂಚಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಉಲ್ಲಂಘನೆ ಮಾಡಬಾರದು ಎಂದರು.

ಸೂಲಿಬೆಲೆಯಲ್ಲಿ ನಡೆಯುವ ಭಾನುವಾರದ ಸಂತೆಯನ್ನು ಮುಂದಿನ ಆದೇಶದವರೆಗೆ ರದ್ದುಪಡಿಸಲಾಗಿದೆ. ವಾರಾಂತ್ಯದಲ್ಲಿ ತರಕಾರಿಗಳು ಮತ್ತು ಇನ್ನಿತರ ದಿನ ಬಳಕೆಯ ಅವಶ್ಯ ವಸ್ತುಗಳನ್ನು ಸಾಮಾನ್ಯ ಬೆಲೆಗಿಂತ ದುಬಾರಿ ಬೆಲೆಗೆ ಮಾರಾಟ ಮಾಡಬಾರದು. ಸಾರ್ವಜನಿಕರಿಂದ ದೂರುಗಳು ಬಂದರೆ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಂಚಾಯಿತಿ ಅಧಿಕಾರಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.