
ದೇವನಹಳ್ಳಿ: ಕ್ಯಾಂಡಿ ಪ್ಯಾಕೇಟ್‌ಗಳಲ್ಲಿ ಹಶೀಶ್ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಗುರುವಾರ ಮುಂಜಾನೆ ವಶಕ್ಕೆ ಪಡೆದು, 1.70 ಕೆ.ಜಿ ಹಶೀಶ್ (ಚರಸ್) ವಶಡಿಸಿಕೊಂಡಿದ್ದಾರೆ.
ಬ್ಯಾಂಕಾಕ್‌ನಿಂದ ಆಗಮಿಸಿದ್ದ ಪ್ರಯಾಣಿಕನೊಬ್ಬರನ್ನು ಸಂಶಯದಿಂದಾಗಿ ತೀವ್ರ ತಪಾಸಣೆ ನಡೆಸಿದಾಗ, ಮಿಠಾಯಿ ಮತ್ತು ಕ್ಯಾಂಡಿ ಪ್ಯಾಕೆಟ್‌ನೊಳಗೆ ಮಾದಕ ವಸ್ತು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ವಶಪಡಿಸಿಕೊಂಡ ಹಶೀಶ್ ಮೌಲ್ಯ ₹4.25 ಲಕ್ಷ ಎಂದು ಅಂದಾಜಿಸಲಾಗಿದೆ. ಆರೋಪಿಯನ್ನು ಮಾದಕ ವಸ್ತುಗಳ ನಿಷೇಧ ಕಾಯ್ದೆ (ಎನ್‌ಡಿಪಿಎಸ್) ಅಡಿಯಲ್ಲಿ ಬಂಧಿಸಿ ತನಿಖೆ ಕೈಗೊಳ್ಳಲಾಗಿದೆ.
9ಕೆ.ಜಿ. ಹೈಡ್ರೋ ಪೊನಿಕ್ ಗಾಂಜಾ ವಶ: ವಿಮಾನ ನಿಲ್ದಾಣಕ್ಕೆ ಬುಧವಾರ ರಾತ್ರಿ ಬ್ಯಾಂಕಾಕ್‌ನಿಂದ ಆಗಮಿಸಿದ್ದ ಪ್ರಯಾಣಿಕನೊಬ್ಬನಿಂದ 9.7ಕೆ.ಜಿ ಹೈಡ್ರೋಪೊನಿಕ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರಿನ ಕಸ್ಟಮ್ಸ್ ಅಧಿಕಾರಿಗಳು ಬುಧವಾರ ತಡರಾತ್ರಿ ತಪಾಸಣೆ ನಡೆಸಿದ ವೇಳೆ, ಬ್ಯಾಗ್‌ನೊಳಗೆ ಅಡಗಿಸಿದ್ದ ಮಾದಕ ವಸ್ತು ಪತ್ತೆಯಾಗಿದೆ. ಗಾಂಜಾದ ಮೌಲ್ಯ ₹3.39 ಕೋಟಿ ಎಂದು ಅಂದಾಜಿಸಲಾಗಿದೆ.
ಆರೋಪಿಯನ್ನು ಮಾದಕ ವಸ್ತುಗಳು ನಿಷೇಧ ಕಾಯ್ದೆ(ಎನ್‌ಡಿಪಿಎಸ್) ಅಡಿಯಲ್ಲಿ ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.