ADVERTISEMENT

ಕಾರು ಅಪಘಾತ ಗರ್ಭಿಣಿ ಸಾವು

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2018, 12:37 IST
Last Updated 8 ಡಿಸೆಂಬರ್ 2018, 12:37 IST

ವಿಜಯಪುರ: ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ಪರೀಕ್ಷೆ ಮಾಡಿಸಿಕೊಂಡು ವಾಪಸ್‌ ಬರುವ ವೇಳೆ ಕಾರು ಡಿಕ್ಕಿ ಹೊಡೆದಿರುವ ಪರಿಣಾಮ ಗರ್ಭಿಣಿ ಕಲಾವತಿ (26) ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಮೃತರನ್ನು ಹೋಬಳಿಯ ತಿಮ್ಮಹಳ್ಳಿ ಗ್ರಾಮದ ಪೂಜಪ್ಪ ಅವರ ಪತ್ನಿ ಕಲಾವತಿ ಎಂದು ಗುರುತಿಸಲಾಗಿದೆ. ದೇವನಹಳ್ಳಿ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡು ದ್ವಿಚಕ್ರ ವಾಹನದಲ್ಲಿ ವಾಪಸ್‌ ಬರುವಾಗ ದೇವನಹಳ್ಳಿ ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಪೂಜಪ್ಪ ಹಾಗೂ ಪತ್ನಿ ತೀವ್ರವಾಗಿ ಗಾಯಗೊಂಡಿದ್ದಾರೆ.

ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪೂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಿಮ್ಮಹಳ್ಳಿ ಗ್ರಾಮದ ಮಂಜುನಾಥ್ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.