ADVERTISEMENT

SSLC ಪರೀಕ್ಷಾ ಕೇಂದ್ರ ಕಣ್ಗಾವಲಿಗೆ ಅಳವಡಿಸಿದ್ದ ಸಿ.ಸಿ.ಟಿ.ವಿ ಕ್ಯಾಮೆರಾ ನಾಶ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2025, 23:01 IST
Last Updated 21 ಮಾರ್ಚ್ 2025, 23:01 IST
<div class="paragraphs"><p>ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೊಠಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾವನ್ನು ಕಿತ್ತು ಬಿಸಾಡಿರುವುದು</p></div>

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೊಠಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾವನ್ನು ಕಿತ್ತು ಬಿಸಾಡಿರುವುದು

   

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರ ಕಣ್ಗಾವಲಿಗೆ ಅಳವಡಿಸಿದ್ದ ಸಿ.ಸಿ.ಟಿ.ವಿ ಕ್ಯಾಮೆರಾ ಗಳನ್ನು ನಾಶಪಡಿಸಲಾಗಿದೆ.

ಪರೀಕ್ಷಾ ಕೇಂದ್ರದ ಕೊಠಡಿಗಳು ಹಾಗೂ ಹೊರಭಾಗದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ಗಳನ್ನು ಗುರುವಾರ ರಾತ್ರಿ ಕಿಡಿಗೇಡಿಗಳು ಕಿತ್ತು ಬಿಸಾಡಿದ್ದಾರೆ. 10 ಕೊಠಡಿಗಳಲ್ಲಿ 14 ಕ್ಯಾಮೆರಾ ಅಳವಡಿಸಲಾಗಿತ್ತು. ಬಾಗಿಲು ಬೀಗ ಮುರಿದು ಒಳಗೆ ನುಗ್ಗಿ, 6 ಕ್ಯಾಮೆರಾಗಳನ್ನು ಕಿತ್ತು ಹಾಕಿದ್ದಾರೆ. 

ADVERTISEMENT

ಪರೀಕ್ಷೆ ಆರಂಭಕ್ಕೂ ಮುನ್ನವೇ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಕ್ಯಾಮೆರಾಗಳನ್ನು ಮತ್ತೆ ಜೋಡಿಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟರು. ಯಾವುದೇ ಗೊಂದಲ ಇಲ್ಲದೆ ಪರೀಕ್ಷೆ ಸುಗಮವಾಗಿ ನಡೆಯಿತು.

ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಭೇಟಿ ನೀಡಿ ಪರಿಶೀಲಿಸಿದರು. ಕ್ಯಾಮೆರಾ ಹಾಳು ಮಾಡುವ ದೃಶ್ಯ ಸೆರೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೈಯೀದಾ ಅನೀಸ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.