ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದಿಂದ ಈಗಾಗಲೇ ಜಾತಿ ಗಣತಿ ಮಾಡಿ ಸುಮಾರು 12 ವರ್ಷಗಳು ಕಳೆದಿವೆ. ಈಗ ಸಾಕಷ್ಟು ಬದಲಾವಣೆ ಆಗಿದೆ. ಈಗ ಆ ವರದಿ ಅಪ್ರಸ್ತುತ. ಹೀಗಾಗಿ ಕೇಂದ್ರ ಸರ್ಕಾರದಿಂದ ಜಾತಿ ಗಣತಿ ಮಾಡಲು ತೀರ್ಮಾನಿಸಲಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ತಾಲ್ಲೂಕಿನ ಹಾಡೋನಹಳ್ಳಿಯಲ್ಲಿ ಮಾತನಾಡಿ, 10 ವರ್ಷಕ್ಕೊಮ್ಮೆ ಜಾತಿ ಗಣತಿ ಮಾಡಬೇಕು. ಅದನ್ನು ಈಗಿನ ಕಾಂಗ್ರೆಸ್ ಸರ್ಕಾರ ಮಾಡಿಲ್ಲ. ಹೊಸದಾಗಿ ರಾಜ್ಯ ಸರ್ಕಾರ ಜಾತಿ ಗಣತಿ ಮಾಡುವುದಾದರೆ ಮಾಡಲಿ, ಇಲ್ಲದಿದ್ದಲ್ಲಿ ಕೇಂದ್ರ ಸರ್ಕಾರ ಗಣತಿ ಮಾಡುವ ತನಕ ಕಾಯಬೇಕು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.