ADVERTISEMENT

ಸೆಂಟ್ರಿಂಗ್‌ ಕುಸಿತ: ಇಬ್ಬರು ಕಾರ್ಮಿಕರ ಸಾವು

ನಿರ್ಮಾಣ ಹಂತದ ಶಾಲಾ ಕಟ್ಟಡದಲ್ಲಿ ಘಟನೆ: ‌17 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 19 ಜನವರಿ 2024, 21:22 IST
Last Updated 19 ಜನವರಿ 2024, 21:22 IST
ಆನೇಕಲ್‌ ತಾಲ್ಲೂಕಿನ ಬಾಡರಹಳ್ಳಿ ಬಳಿ ನಿರ್ಮಾಣ ಹಂತದಲ್ಲಿದ್ದ ಶಾಲೆ ಕಟ್ಟಡ ಕುಸಿದಿರುವುದು
ಆನೇಕಲ್‌ ತಾಲ್ಲೂಕಿನ ಬಾಡರಹಳ್ಳಿ ಬಳಿ ನಿರ್ಮಾಣ ಹಂತದಲ್ಲಿದ್ದ ಶಾಲೆ ಕಟ್ಟಡ ಕುಸಿದಿರುವುದು   

ಆನೇಕಲ್: ತಾಲ್ಲೂಕಿನ ಬಾಡರಹಳ್ಳಿ ಬಳಿ ಶುಕ್ರವಾರ ನಿರ್ಮಾಣ ಹಂತದಲ್ಲಿದ್ದ ಖಾಸಗಿ ಶಾಲೆ ಕಟ್ಟಡದ ಸೆಂಟ್ರಿಂಗ್‌ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 17 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಶ್ಚಿಮ ಬಂಗಾಳ ಕೋಲ್ಕತ್ತ ಮೂಲದ ಸಾಯಿದ್‌ ಅಲಿ ಮಂಡಲ್‌ (40), ಮಿನಾಲ್‌ ಬಿಶ್ವಾಸ್‌ (30) ಮೃತ ಕಾರ್ಮಿಕರು.

ಗಾಯಾಳುಗಳನ್ನು ಆನೇಕಲ್‌ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ 19 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಶುಕ್ರವಾರ ಬೆಳಿಗ್ಗೆ ಕಟ್ಟಡದ ಎರಡನೇ ಮಹಡಿಯಲ್ಲಿ ಕಾಂಕ್ರಿಟ್‌ ಹಾಕುವ ವೇಳೆ ಸೆಂಟ್ರಿಂಗ್‌ ಕುಸಿದಿದೆ.

ಕ್ರಮ: ಸ್ಥಳಕ್ಕೆ ಭೇಟಿ ನೀಡಿದ ಸಂಸದ ಡಿ.ಕೆ.ಸುರೇಶ್‌, ಈ ಸಂಬಂಧ ತನಿಖೆ ನಡೆಸಿ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸರು ಮತ್ತು ಕಾರ್ಮಿಕ ಇಲಾಖೆಗೆ ಸೂಚಿಸಲಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಎಸ್‌.ಪಿ ಮಲ್ಲಿಕಾರ್ಜುನ ಬಾಲದಂಡಿ, ಮೇಲ್ನೋಟಕ್ಕೆ ನಿರ್ಲಕ್ಷ್ಯ ಕಂಡು ಬಂದಿದೆ. ಘಟನೆ ಕಾರಣರಾದವರ ವಿರುದ್ಧ ಕಾನುನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಗಾಯಾಳುಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದರು
ಸ್ಥಳಕ್ಕೆ ಸಂಸದ ಡಿ.ಕೆ.ಸುರೇಶ್ ಮತ್ತು ಶಾಸಕ ಬಿ.ಶಿವಣ್ಣ ಭೇಟಿ ನೀಡಿ ಪರಿಶೀಲಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.