ADVERTISEMENT

ಚಂದಾಪುರ: ಫೆ.1ರಂದು ಆಟೊ ಚಾಲಕರಿಗೆ ಸಮವಸ್ತ್ರ ವಿತರಣೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2026, 2:39 IST
Last Updated 30 ಜನವರಿ 2026, 2:39 IST
ಆಟೊ
ಆಟೊ   

ಚಂದಾಪುರ(ಆನೇಕಲ್):  ಕನ್ನಡ ಸಂಘಟನೆಗಳ ಕಾರ್ಮಿಕ ಒಕ್ಕೂಟದಿಂದ ಕಾರ್ಮಿಕರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಫೆ.1ರಂದು ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ವೇಳೇ ಚಂದಾಪುರ ಆಟೊ ಚಾಲಕರಿಗೆ ಒಕ್ಕೂಟದಿಂದ ಸಮವಸ್ತ್ರ ವಿತರಿಸಲಾಗುವುದು ಎಂದು ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಬುಲೆಟ್‌ ಬಾಬು ತಿಳಿಸಿದರು.

ಆನೇಕಲ್ ತಾಲ್ಲೂಕಿನಲ್ಲಿ ಐದು ಕೈಗಾರಿಕ ಪ್ರದೇಶಗಳಿವೆ. ಲಕ್ಷಾಂತರ ಮಂದಿ ಕಾರ್ಮಿಕರಿದ್ದಾರೆ ಅವರ ಹಕ್ಕುಗಳು ಮತ್ತು ಅವರ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ. ಕೈಗಾರಿಕ ಪ್ರದೇಶಗಳಲ್ಲಿನ ಮೂಲಸೌಲಭ್ಯಗಳು, ಇಎಸ್‌ಐ ಆಸ್ಪತ್ರೆ ಕಾಮಗಾರಿಗೆ ವೇಗ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಕಾರ್ಮಿಕರಿಂದ ಮಾಹಿತಿ ಪಡೆಯಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜಾಗೃತಿ ಕಾರ್ಯಕ್ರಮದೊಂದಿಗೆ ಸಮಾಜ ಸೇವೆ ಮಾಡುವ ನಿಟ್ಟಿನಲ್ಲಿ ವೃದ್ಧಾಶ್ರಮ ಮತ್ತು ಅನಾಥಾಶ್ರಮಗಳಲ್ಲಿ ಅನ್ನದಾನ ಆಯೋಜಿಸಲಾಗಿದೆ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.