
ಆನೇಕಲ್: ತಾಲ್ಲೂಕಿನ ಚಂದಾಪುರ ಮುಖ್ಯ ರಸ್ತೆಯು ಹದಗೆಟ್ಟು ಧೂಳುಮಯವಾಗಿದ್ದು, ಬೈಕ್ ಸವಾರರು ಮತ್ತು ಪಾದಚಾರಿಗಳು ಓಡಾಲು ಆಗುತ್ತಿಲ್ಲವೆಂದು ಜನರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಧೂಳುಯುಕ್ತ ರಸ್ತೆಯಲ್ಲಿ ಪ್ರತಿದಿನ ಮೂರು ಬಾರಿ ನೀರು ಹಾಕಿಸುವಂತೆ ಚಂದಾಪುರ ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್ ಅವರು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗೆ ಪತ್ರ ಬರೆದಿದ್ದಾರೆ.
ಆನೇಕಲ್ ತಾಲ್ಲೂಕಿನ ಹೃದಯಭಾಗದಲ್ಲಿರುವ ಚಂದಾಪುರ ಮುಖ್ಯರಸ್ತೆಯನ್ನು ಅಭಿವೃದ್ಧಿಗಾಗಿ ಅಗೆದು ಜಲ್ಲಿ ಹಾಕಲಾಗಿದೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಕಾಮಗಾರಿಯನ್ನು ನಡೆಸಲಾಗುತ್ತಿಲ್ಲ. ಜಲ್ಲಿ ತುಂಬಿರುವ ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರು ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚಂದಾಪುರದ ಚಿನ್ಮಯ ಸೇವಾ ಸಂಸ್ಥೆಯು ರಸ್ತೆಯಲ್ಲಿ ಧೂಳು ಕಡಿಮೆ ಮಾಡಲು ಕ್ರಮ ವಹಿಸಬೇಕು ಎಂದು ಪುರಸಭೆಗೆ ಮನವಿ ಸಲ್ಲಿಸಿದ್ದಾರೆ.
ಚಂದಾಪುರ ಸೂರ್ಯಸಿಟಿ-ಚಂದಾಪುರ ವೃತ್ತದವರೆಗೆ ರಸ್ತೆ ಧೂಳಿನಿಂದಾಗಿ ಸಾರ್ವಜನಿಕರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ. ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ವೇಗ ನೀಡಬೇಕು. ರಸ್ತೆ ಧೂಳಿನಿಂದಾಗಿ ಸಾರ್ವಜನಿಕರಿಗೆ ಅಲರ್ಜಿ, ಅಸ್ತಮ ಬರುವಂತಾಗಿದೆ ಎಂದು ಚಿನ್ಮಯ ಸೇವಾ ಸಂಸ್ಥೆಯ ಚಿನ್ನಪ್ಪ.ವೈ.ಚಿಕ್ಕಹಾಗಡೆ, ರಾಮಸಾಗರ ನಂದೀಶ್, ಶ್ರೀಕಾಂತ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.