ADVERTISEMENT

ಚುನಾವಣಾ ಅಧಿಕಾರಿಗಳಿಂದ ಸಿಎಂ ಬೊಮ್ಮಾಯಿ ಕಾರು ತಪಾಸಣೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2023, 1:10 IST
Last Updated 1 ಏಪ್ರಿಲ್ 2023, 1:10 IST
ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹುಡ್ಯ ಚೆಕ್ ಪೋಸ್ಟ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರನ್ನು ತಪಾಸಣೆ ಮಾಡಲಾಯಿತು
ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹುಡ್ಯ ಚೆಕ್ ಪೋಸ್ಟ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರನ್ನು ತಪಾಸಣೆ ಮಾಡಲಾಯಿತು   

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ ಜಿಲ್ಲೆ): ಕುಟುಂಬ ಸಮೇತ ಶುಕ್ರವಾರ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರನ್ನು ಚೆಕ್ ಪೋಸ್ಟ್‌ನಲ್ಲಿ ತಡೆದ ಚುನಾವಣಾ ಅಧಿಕಾರಿಗಳು ತಪಾಸಣೆ ಮಾಡಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಗಡಿಯ ಹೊಸಹುಡ್ಯ ಸಮೀಪ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ಮುಖ್ಯಮಂತ್ರಿ ಕಾರು ತಡೆದು ತಪಾಸಣೆ ನಡೆಸಿದರು. ನಂತರ ಬೊಮ್ಮಾಯಿ ಘಾಟಿ ದೇವಾಲಯಕ್ಕೆ ತೆರಳಿ ಪತ್ನಿ ಸಮೇತ ಸುಬ್ರಹ್ಮಣ್ಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಜೊತೆಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.