ADVERTISEMENT

ಚಿಕ್ಕಬಳ್ಳಾಪುರ ಸಂಪರ್ಕ ಸೇತುವೆ ಜಲಾವೃತ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2021, 3:14 IST
Last Updated 12 ಅಕ್ಟೋಬರ್ 2021, 3:14 IST
ದೊಡ್ಡಬಳ್ಳಾಪುರ ಚಿಕ್ಕಬಳ್ಳಾಪುರ ಸಂಪರ್ಕ ಸೇತುವೆ ಜಲಾವೃತ್ತವಾಗಿರುವುದು
ದೊಡ್ಡಬಳ್ಳಾಪುರ ಚಿಕ್ಕಬಳ್ಳಾಪುರ ಸಂಪರ್ಕ ಸೇತುವೆ ಜಲಾವೃತ್ತವಾಗಿರುವುದು   

ದೊಡ್ಡಬಳ್ಳಾಪುರ: ಒಂದು ವಾರದಿಂದಲು ಪಂಚಗಿರಿ ಶ್ರೇಣಿಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿದ ಪರಿಣಾಮ ಜಕ್ಕಲಮೊಡಗು ಜಲಾಶಯ ತುಂಬಿ ಹರಿಯುತ್ತಿದೆ.

ಜಲಾಶಯದ ಹಿನ್ನೀರಿನ ಮಟ್ಟ ಹೇರಿಕೆಯಾಗಿ ಗುಂಗೀರ್ಲಹಳ್ಳಿ ಬಳಿ ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಸಂಪರ್ಕ ಸೇತುವೆ ಮೇಲೆ ನೀರು ಹರಿಯುತ್ತಿವೆ. ಹೀಗಾಗಿ ಸೇತುವೆ ಮೇಲೆ ಸಂಚರಿಸುವ ವಾಹನ ಸವಾರರು ಜೀವ ಕೈಯಲ್ಲಿಡಿದು ಓಡಾಡಬೇಕಾದ ಅನಿರ್ವಾರ್ಯತೆ ಉಂಟಾಗಿದೆ.

ಚಿಕ್ಕಬಳ್ಳಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಾದ ಜಕ್ಕಲಮೊಡಗು, ಗುಂಗೀರ್ಲಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಲೇನಹಳ್ಳಿ ಮುಂತಾದ ಗ್ರಾಮಗಳಿಂದ ದೊಡ್ಡಬಳ್ಳಾಪುರ-ಚಿಕ್ಕಬಳ್ಳಾಪುರ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಆದರೆ ಸೇತುವೆ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದರಿಂದ ಗ್ರಾಮಸ್ಥರು ನಡೆದಾಡಲು ಸಹ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ADVERTISEMENT

ಈ ಭಾಗದ ಗ್ರಾಮಗಳಿಗೆ ದಿನದಲ್ಲಿ ಒಂದು ಬಾರಿ ಮಾತ್ರ ಬರುವ ಸರ್ಕಾರಿ ಬಸ್ ಸಹ ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ಸಂಚಾರವನ್ನು ನಿಲ್ಲಿಸಿದೆ. ವಿದ್ಯಾರ್ಥಿಗಳು ಶಾಲಾ,ಕಾಲೇಜುಗಳಿಗೆ ತೆರಳಲು ಸೇತುವೆ ಮೇಲೆ ಅಪಾಯಕಾರಿ ಮಟ್ಟದಲ್ಲಿ ಹರಿಯುವ ನೀರಿನಲ್ಲೆ ನಡೆದುಕೊಂಡು ಹೋಗಬೇಕಾದ ಅನಿವಾರ್ಯತೆ ಉಂಟಾಗಿದೆ.

ಯಾವುದೇ ಅವಘಡ ಸಂಭವಿಸುವ ಮುನ್ನ ಎರಡೂ ತಾಲ್ಲೂಕಿನ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸುಗಮ ಸಂಚಾರಕ್ಕೆ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.