ADVERTISEMENT

ಆನೇಕಲ್: ಬಾಲ್ಯ ವಿವಾಹ ವಿರುದ್ಧ ಮೊಳಗಿದ ಘೋಷಣೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2025, 2:05 IST
Last Updated 21 ಡಿಸೆಂಬರ್ 2025, 2:05 IST
ಆನೇಕಲ್‌ನಲ್ಲಿ ಶನಿವಾರ ಬಾಲ್ಯ ವಿವಾಹ ಅಪರಾಧ ತಡೆಗಟ್ಟುವಿಕೆ ಕಾನೂನು ಅರಿವು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ನ್ಯಾಯಾಧೀಶರು, ವಕೀಲರು ಮತ್ತು ವಿದ್ಯಾರ್ಥಿಗಳು
ಆನೇಕಲ್‌ನಲ್ಲಿ ಶನಿವಾರ ಬಾಲ್ಯ ವಿವಾಹ ಅಪರಾಧ ತಡೆಗಟ್ಟುವಿಕೆ ಕಾನೂನು ಅರಿವು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ನ್ಯಾಯಾಧೀಶರು, ವಕೀಲರು ಮತ್ತು ವಿದ್ಯಾರ್ಥಿಗಳು   

ಆನೇಕಲ್: ಪಟ್ಟಣದಲ್ಲಿ ಶನಿವಾರ ಬಾಲ್ಯ ವಿವಾಹ ತಡೆಗಟ್ಟುವಿಕೆ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. ನೂರಾರು  ವಿದ್ಯಾರ್ಥಿಗಳು ಜಾಗೃತಿ ಫಲಕ ಹಿಡಿದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಜಾಗೃತಿ ಮೂಡಿಸಿದರು.

ಬಾಲ್ಯ ವಿವಾಹ ಅಪರಾಧ. ಮಕ್ಕಳ ಬಾಳು ಬೆಳಗಿಸಿ, ಬಾಲ್ಯ ವಿವಾಹ ನಿಲ್ಲಿಸಿ ಮುಂತಾದ ಘೋಷಣೆಗಳನ್ನು ಮೊಳಗಿಸಿದ ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ತಾಲ್ಲೂಕು ವಕೀಲರ ಸಂಘ, ಬೆಂಗಳೂರು ಪಶ್ಚಿಮ ಜಿಲ್ಲಾ ಮಕ್ಕಳ ಸಂರಕ್ಷಣಾ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಂಟಿಯಾಗಿ ಈ ಕಾರ್ಯಕ್ರಮ ಆಯೋಜಿಸಿದ್ದವು.

ADVERTISEMENT

ಸಾಮಾಜಿಕ ಪಿಡುಗಾಗಿರುವ ಬಾಲ್ಯ ವಿವಾಹದಿಂದಾಗಿ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ ಮತ್ತು ಅನಕ್ಷರತೆ ಹೆಚ್ಚಾಗುತ್ತದೆ. ಭವಿಷ್ಯದ ದೃಷ್ಟಿಯಿಂದ ಬಾಲ್ಯ ವಿವಾಹ ನಿಷೇಧಿಸಲಾಗಿದೆ. ಮಕ್ಕಳನ್ನು ಮದುವೆಯಾಗುವ ಯಾವುದೇ ವ್ಯಕ್ತಿ, ಬಾಲ್ಯ ವಿವಾಹಕ್ಕೆ ಕುಮ್ಮಕ್ಕು ನೀಡುವರ ವಿರುದ್ಧ ಪ್ರಕರಣ ದಾಖಲಾಗುತ್ತದೆ ಎಂದು ಜಿಲ್ಲಾ ನ್ಯಾಯಾಧೀಶ ಬಿ. ಸೋಮಶೇಖರ್ ಹೇಳಿದರು.

ಬಡತನ, ಅನಕ್ಷರತೆ, ಮೂಢನಂಬಿಕೆ ಸೇರಿದಂತೆ ವಿವಿಧ ಕಾರಣಗಳಿಂದ ಬಾಲ್ಯ ವಿವಾಹ ಅಸ್ತಿತ್ವದಲ್ಲಿದೆ. ಬಾಲ್ಯ ವಿವಾಹದಿಂದ ದುಷ್ಪರಿಣಾಮ ಹೆಚ್ಚು. ಮಕ್ಕಳ ಸಾಮಾಜಿಕ, ಆರ್ಥಿಕ ಮತ್ತು ಆರೋಗ್ಯ ಸ್ಥಿತಿ ಹದಗೆಡುತ್ತದೆ. ಬಾಲ್ಯಾವಸ್ಥೆಯಲ್ಲಿ ಮಕ್ಕಳಿಗೆ ಆಟ, ಪಾಠಗಳತ್ತ ಮಾತ್ರ ಗಮನ ಇರಬೇಕು. ಸಂಸಾರದ ಜಂಜಾಟದಿಂದಾಗಿ ಅವರ ಭವಿಷ್ಯವೇ ಹಾಳಾಗುತ್ತದೆ. ಸಮಾಜದಲ್ಲಿ ಅವಮಾನಗಳು ಹೆಚ್ಚಾಗುತ್ತವೆ. ಬಾಲ್ಯ ವಿವಾಹ ಅಪರಾಧಕ್ಕೆ ಎರಡು ವರ್ಷಗಳ ಕಠಿಣ ಜೈಲುವಾಸ ಮತ್ತು ₹1 ಲಕ್ಷ ದಂಡವಿದ್ದು ಬಾಲ್ಯ ವಿವಾಹವನ್ನು ತಡೆಯುವ ನಿಟ್ಟಿನಲ್ಲಿ ಸಮಾಜ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಬೆಂಗಳೂರು ಪಶ್ಚಿಮ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆಶಾ ಹೇಳಿದರು.

ಬಾಲ್ಯ ವಿವಾಹ ಅಪರಾಧ ತಡೆಗಟ್ಟುವಿಕೆ ಕಾನೂನು ಅರಿವು ಜಾಗೃತಿ ಜಾಥದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು

ನ್ಯಾಯಾಧೀಶರಾದ ಕೃಷ್ಣರಾಜ್, ಎಂ.ಮಂಜುನಾಥ್, ಶಂಕರ ರೆಡ್ಡಿ, ಎಸ್‌.ಕೆ.ಜನಾರ್ದನ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ವೈ.ಪ್ರಕಾಶ್ ಫಟಾಪಟ್, ಉಪಾಧ್ಯಕ್ಷ ಹರೀಶ್ ಕುಮಾರ್, ಖಜಾಂಚಿ ಶಾರದ ಮಣಿ, ನಿರ್ದೇಶಕ ಪುರುಷೋತ್ತಮ್, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಗುರುಮೂರ್ತಿ, ಸಿಡಿಪಿಓ ಮಹೇಶ್, ಪೊಲೀಸ್ ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ, ಸರ್ಕಾರಿ ಅಭಿಯೋಜಕರಾದ ಶಾಲಿನಿ, ವಿನೋದ್ ಕುಮಾರ್, ವಕೀಲರ ಸಂಘದ  ವಕೀಲ ಶಿವರಾಜು, ಶ್ರೀಕಂಠಾಚಾರಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.