ADVERTISEMENT

ದೇವನಹಳ್ಳಿ | 'ಬಾಲ್ಯ ವಿವಾಹ ತಡೆಗೆ ಕ್ರಮ: ವಸತಿ ಶಾಲೆ ಮಕ್ಕಳಿಗೆ ಪೌಷ್ಟಿಕ ಆಹಾರ'

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2025, 1:54 IST
Last Updated 30 ಆಗಸ್ಟ್ 2025, 1:54 IST
ಆರ್.ಟಿ.ಇ 2009, ಪೋಕ್ಸೋ 2012 ಹಾಗೂ ಬಾಲನ್ಯಾಯ ಕಾಯ್ದೆ 2015 ರ ಅನುಷ್ಠಾನದ ಕುರಿತು ವಿವಿಧ ಇಲಾಖೆ ಭಾಗಿದಾರರೊಂದಿಗೆ ಪ್ರಗತಿ ಪರಿಶೀಲನಾ ಸಭೆ ಮತ್ತು ತರಬೇತಿ ಕಾರ್ಯಗಾರದಲ್ಲಿ ಅಧಿಕಾರಿಗಳು ಭಾಗವಹಿಸಿದ್ದರು.
ಆರ್.ಟಿ.ಇ 2009, ಪೋಕ್ಸೋ 2012 ಹಾಗೂ ಬಾಲನ್ಯಾಯ ಕಾಯ್ದೆ 2015 ರ ಅನುಷ್ಠಾನದ ಕುರಿತು ವಿವಿಧ ಇಲಾಖೆ ಭಾಗಿದಾರರೊಂದಿಗೆ ಪ್ರಗತಿ ಪರಿಶೀಲನಾ ಸಭೆ ಮತ್ತು ತರಬೇತಿ ಕಾರ್ಯಗಾರದಲ್ಲಿ ಅಧಿಕಾರಿಗಳು ಭಾಗವಹಿಸಿದ್ದರು.   

ದೇವನಹಳ್ಳಿ: ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಮತ್ತು ಅಪ್ರಾಪ್ತ ವಯಸ್ಸಿನ ಬಾಲಕಿಯರ ಗರ್ಭಧಾರಣೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕಾಣೆಯಾದ ಮಕ್ಕಳ ಬಗ್ಗೆ ಠಾಣೆಯಲ್ಲಿ ದಾಖಲಾಗುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ತ್ವರಿತವಾಗಿ ಮಕ್ಕಳನ್ನು ಪತ್ತೆ ಮಾಡಿ ಪೋಷಕರಿಗೆ ಒಪ್ಪಿಸಬೇಕು. ವಸತಿ ಶಾಲೆ ಮಕ್ಕಳಿಗೆ ಪೌಷ್ಟಿಕ ಆಹಾರ, ಆರೋಗ್ಯ ಮತ್ತು ಉತ್ತಮ ಪರಿಸರ ಕಲ್ಪಿಸಬೇಕು. ಇದರಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದರು. 

ಬೀರಸಂದ್ರ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ಆರ್.ಟಿ.ಇ 2009, ಪೋಕ್ಸೋ 2012 ಹಾಗೂ ಬಾಲನ್ಯಾಯ ಕಾಯ್ದೆ 2015  ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನಾ ಸಭೆ ಮತ್ತು ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ADVERTISEMENT

ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ಘಟಕಗಳಲ್ಲಿ ಸೂಕ್ತ ಸೌಲಭ್ಯ ಕಲ್ಪಿಸುವ ಜೊತೆಗೆ ಆಸ್ಪತ್ರೆಗೆಗಳಲ್ಲಿ ಸೂಕ್ತ ಮೂಲಸೌಕರ್ಯ ಒದಗಿಸುವಂತೆ ಆಯೋಗದ ಸದಸ್ಯರು ತಾಕೀತು ಮಾಡಿದರು.

ವಲಸೆ ಕಾರ್ಮಿಕರ ಮಕ್ಕಳು, ನಿರ್ಗತಿಕ ಮಕ್ಕಳನ್ನು ಮೊದಲು ಗುರುತಿಸಿ ಅವರಿಗೆ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮಾಡಿಸಿ, ಸರ್ಕಾರದ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶ ಶ್ರೀಶೈಲ್ ಬಾಗಾಡಿ ಸೂಚಿಸಿದರು.

ಕೈಗಾರಿಕಾ, ಕಾರ್ಖಾನೆಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ದೌರ್ಜನ್ಯಕ್ಕೊಳಗಾದ ಮಕ್ಕಳ ಆಂತರಿಕ ಸಮಾಲೋಚನೆ ನಡೆಸಿ ಸಮಸ್ಯೆ ಪರಿಹರಿಸಬೇಕು ಎಂದರು.

ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿ.ಪಂ ಸಿಇಒ ಕೆ.ಎನ್ ಅನುರಾಧ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರ್ ಗೌಡ, ಶಶಿಧರ್ ಕೋಸಂಬೆ, ಡಾ.ತಿಪ್ಪೇಸ್ವಾಮಿ, ಮಂಜುಳ, ವೆಂಕಟೇಶ್,ಅಪರ್ಣ, ಎಎಸ್ಪಿ ನಾಗರಾಜ್ ಉಪಸ್ಥಿತರಿದ್ದರು.

ಸಭೆಯಲ್ಲಿ ಪ್ರಸ್ತಾಪವಾದ ಅಂಶಗಳು

* ಪ್ರತಿ ಶಾಲೆಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನಾಮಫಲಕ ಕಾಡ್ಡಾಯವಾಗಿ ಪ್ರದರ್ಶಿಸಬೇಕು 

* ದೂರು ಪೆಟ್ಟಿಗೆ ಇರಿಸಬೇಕು

* ಕಡ್ದಾಯವಾಗಿ ಮಕ್ಕಳ ರಕ್ಷಣಾ ಸಮಿತಿ ರಚಿಸಬೇಕು

* ಶಾಲೆಗೆ ಗೈರು ಹಾಜರಾಗುತ್ತಿರುವ ಮಕ್ಕಳ ಬಗ್ಗೆ ಗಮನ ಹರಿಸಬೇಕು

ಮಗು ಶಾಲೆಗೆ ಬರದೇ ಇರಲು ಕಾರಣ ತಿಳಿದು ಪರಿಹರಿಸಬೇಕು 

ಕಾಣೆಯಾದ ಅಥವಾ ಬಾಲಕಾರ್ಮಿಕ ಪದ್ಧತಿ ಅಡಿ ಪತ್ತೆಯಾದ ಮಕ್ಕಳ ರಕ್ಷಣೆ ಆಗಬೇಕು* ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು 

ಸಹಾಯವಾಣಿಗೆ ಕರೆ ಮಾಡಿ ಬಾಲ್ಯ ವಿವಾಹ ಭಿಕ್ಷಾಟನೆಮಕ್ಕಳ ಮಾರಾಟ ಲೈಂಗಿಕ ದೌರ್ಜನ್ಯ ಬಾಲ ಕಾರ್ಮಿಕ ಪದ್ಧತಿ ಕಂಡು ಬಂದಲ್ಲಿ ಸಾರ್ವಜನಿಕರು ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಕ್ಕೆ ಉಚಿತ ಕರೆ ಮಾಡಿ ದೂರು ನೀಡಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.