ADVERTISEMENT

ನಂದಗುಡಿಯ ಪಿಎಂಶ್ರೀ ಶಾಲೆಯಲ್ಲಿ ಚಿಣ್ಣರ ಸಂತೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2026, 2:55 IST
Last Updated 14 ಫೆಬ್ರುವರಿ 2026, 2:55 IST
ಹೊಸಕೋಟೆ ತಾಲ್ಲೂಕಿನ ನಂದಗುಡಿಯ ಪಿಎಂಶ್ರೀ ಕೆಪಿಎಸ್ ಶಾಲಾ ಆವರಣದಲ್ಲಿ ಚಿಣ್ಣರ ಮಕ್ಕಳ ಸಂತೆ ನಡೆಯಿತು
ಹೊಸಕೋಟೆ ತಾಲ್ಲೂಕಿನ ನಂದಗುಡಿಯ ಪಿಎಂಶ್ರೀ ಕೆಪಿಎಸ್ ಶಾಲಾ ಆವರಣದಲ್ಲಿ ಚಿಣ್ಣರ ಮಕ್ಕಳ ಸಂತೆ ನಡೆಯಿತು   

ನಂದಗುಡಿ(ಹೊಸಕೋಟೆ): ತಾಲ್ಲೂಕಿನ ನಂದಗುಡಿಯ ಪಿಎಂಶ್ರೀ ಕೆಪಿಎಸ್ ಶಾಲಾ ಆವರಣದಲ್ಲಿ ಚಿಣ್ಣರ ಮಕ್ಕಳ ಸಂತೆ ನಡೆಯಿತು.

ಮಕ್ಕಳು ವಿವಿಧ ತಿಂಡಿ ತಿನಿಸು ಮಾಡಿಸಿಕೊಂಡು ಸಂತೆಗೆ ಬಂದ ವ್ಯಾಪಾರದ ಕೈಚಳಕ ತೋರಿದರು. ಕೋಸು, ಬದನೆ, ತೆಂಗಿನಕಾಯಿ, ಪಪ್ಪಾಯಿ, ಕೊತ್ತಂಬರಿ, ವಿವಿಧ ತರಕಾರಿ, ಸೊಪ್ಪು ಮಾರಾಟ ಜೋರಾಗಿ ನಡೆಯಿತು. 

ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾದರೆ ಸಾಲದು, ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿದಾಗ ವ್ಯವಹಾರಿಕ ಜ್ಞಾನ ಹೆಚ್ಚಾಗುತ್ತದೆ. ಸಾಂಸ್ಕೃತಿಕ ಚಟುವಟಿಕೆ ಜೊತೆಯಲ್ಲಿ ಸಾರ್ವಜನಿಕರ ಜೊತೆ ಬೆರೆತು ಕಲಿಯಲು ಸಹಕಾರಿಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎಂ. ಮುನಿಸ್ವಾಮಯ್ಯ ತಿಳಿಸಿದರು.

ADVERTISEMENT

ಗ್ರಾ.ಪಂ ಸದಸ್ಯ ಎನ್.ಎನ್. ಮಂಜುನಾಥ್, ಎಸ್‌ಡಿಎಂಸಿ ಉಪಾಧ್ಯಕ್ಷ ಎನ್. ಗಂಗಾಧರ್, ಸದಸ್ಯರಾದ ಜಿ.ಮೂರ್ತಿ, ಸಿಆರ್‌ಪಿ ಸತೀಶ್‌ಕುಮಾರ್, ಮುಖ್ಯ ಶಿಕ್ಷಕರಾದ ಡಿ.ಕೃಷ್ಣಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.