ADVERTISEMENT

4ರಂದು ಹೊಸಕೋಟೆಗೆ ಸಿಎಂ ಭೇಟಿ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2019, 13:12 IST
Last Updated 1 ನವೆಂಬರ್ 2019, 13:12 IST

ದೇವನಹಳ್ಳಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನ. 4 ರಂದು ಹೊಸಕೋಟೆ ತಾಲ್ಲೂಕಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಇದಕ್ಕಾಗಿ ಪೂರ್ವಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ, ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅವರು ಹೊಸಕೋಟೆ ತಾಲ್ಲೂಕಿನ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಇಲಾಖಾವಾರು ಕಾರ್ಯಕ್ರಮಗಳ ಮಾಹಿತಿ ನೀಡಬೇಕು ಎಂದರು.

ADVERTISEMENT

ವಿವಿಧ ಇಲಾಖೆಗಳ ಪ್ರಮುಖ ಯೋಜನೆಗಳಡಿ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಿದ್ದು, ಅರ್ಹ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಕರಿಯಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.