ADVERTISEMENT

ಬಿಜೆಪಿಗಾಗಿ ರಜೆ ದಿನ ಮೀಸಲಿಡಿ: ಡಾ.ಸಿ.ಎನ್‌.ಮಂಜುನಾಥ್‌ ಸಲಹೆ

ಐಟಿ ಉದ್ಯೋಗಗಳಿಗೆ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ಸಲಹೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2024, 5:15 IST
Last Updated 8 ಏಪ್ರಿಲ್ 2024, 5:15 IST
ಆನೇಕಲ್ ತಾಲ್ಲೂಕಿನ ಚಂಬೇನಹಳ್ಳಿಯಲ್ಲಿ ಸರ್ಜಾಪುರ ಸಿಟಿಜನ್ ಫೋರಂ ವತಿಯಿಂದ ಆಯೋಜಿಸಿದ್ದ ಸಂವಾದ ಸಂಕಲ್ಪ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರನ್ನು ನಿವೃತ್ತ ಯೋಧರು ಸನ್ಮಾನಿಸಿದರು
ಆನೇಕಲ್ ತಾಲ್ಲೂಕಿನ ಚಂಬೇನಹಳ್ಳಿಯಲ್ಲಿ ಸರ್ಜಾಪುರ ಸಿಟಿಜನ್ ಫೋರಂ ವತಿಯಿಂದ ಆಯೋಜಿಸಿದ್ದ ಸಂವಾದ ಸಂಕಲ್ಪ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರನ್ನು ನಿವೃತ್ತ ಯೋಧರು ಸನ್ಮಾನಿಸಿದರು   

ಆನೇಕಲ್: ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಿಜೆಪಿ ಅವಶ್ಯಕತೆಯಿದೆ. ಐಟಿ ಕಂಪನಿಗಳ ಉದ್ಯೋಗಿಗಳು ತಮ್ಮ ರಜೆ ದಿನಗಳಲ್ಲಿ ಬಿಜೆಪಿ ಹಾಗೂ ದೇಶಕ್ಕಾಗಿ ದುಡಿಯಬೇಕು. ಈ ನಿಟ್ಟಿನಲ್ಲಿ ಯುವ ಸಮುದಾಯವು ಸದೃಢ ದೇಶಕ್ಕಾಗಿ ಬಿಜೆಪಿ ಬೆಂಬಲಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ತಿಳಿಸಿದರು.

ತಾಲ್ಲೂಕಿನ ಚಂಬೇನಹಳ್ಳಿಯಲ್ಲಿ ಸರ್ಜಾಪುರ ಸಿಟಿಜನ್‌ ಫೋರಂ ವತಿಯಿಂದ ಆಯೋಜಿಸಿದ್ದ ಸಂವಾದ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ರಾಜಕೀಯ ಕ್ಷೇತ್ರದಲ್ಲಿ ಸೇವೆ ವಿಸ್ತರಿಸುವ ಅಭಿಲಾಷೆಯಿಂದ ರಾಜಕೀಯ ಪ್ರವೇಶ ಮಾಡಿದ್ದೇನೆ. ಸರ್ಕಾರಿ ಆಸ್ಪತ್ರೆಯನ್ನು ಹೈಟೆಕ್‌ ಆಸ್ಪತ್ರೆಯನ್ನಾಗಿ ಮಾಡಿದ ಅನುಭವವಿದೆ. ಈ ಅನುಭವ ಮತ್ತು ಜ್ಞಾನವನ್ನು ಬಳಸಿ ದೇಶದಲ್ಲಿ ಉತ್ತಮ ಆರೋಗ್ಯ ಸೌಲಭ್ಯವನ್ನು ಕಲ್ಪಿಸುವ ಮೂಲಕ ಜನಸೇವೆ ಮಾಡಬೇಕು’ ಎಂದು ಹೇಳಿದರು.

ADVERTISEMENT

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಆರೋಗ್ಯ, ಶಿಕ್ಷಣ, ಮೂಲಸೌಲಭ್ಯ, ಕೈಗಾರಿಕೆಗಳ ಅಭಿವೃದ್ಧಿಯ ದೃಷ್ಠಿಕೋನ ಹೊಂದಲಾಗಿದ್ದು ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸಬೇಕು. ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.

ನಮೋ ಬ್ರಿಗೇಡ್‌ನ ಸೂಲಿಬೆಲೆ ಚಕ್ರವರ್ತಿ ಮಾತನಾಡಿದರು.

ವಿಧಾನ ಪರಿಷತ್‌ ಸದಸ್ಯ ಗೋಪಿನಾಥರೆಡ್ಡಿ, ಮುಖಂಡರಾದ ಟಿ.ವಿ.ಬಾಬು, ಹುಲ್ಲಹಳ್ಳಿ ಶ್ರೀನಿವಾಸ್‌, ರಾಧಾಕೃಷ್ಣ, ಕೆ.ವಿ.ಶಿವಪ್ಪ, ನಿತಿನ್‌ ಜಯಣ್ಣ, ಲಕ್ಷ್ಮೀನಾರಾಯಣ್, ರಾಜಶೇಖರರೆಡ್ಡಿ, ಭರತ್‌ ಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.