ADVERTISEMENT

ಆನೇಕಲ್: ‘ಕೊರೊನಾ ನಿಯಂತ್ರಣಕ್ಕೆ ಸಹಕರಿಸಿ’

ಆರೋಗ್ಯ ಕೇಂದ್ರಗಳಿಗೆ ಲ್ಯಾಪ್‌ಟಾಪ್‌ ವಿತರಣೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2020, 7:58 IST
Last Updated 14 ಸೆಪ್ಟೆಂಬರ್ 2020, 7:58 IST
ಆನೇಕಲ್‌ನಲ್ಲಿ ಸನ್‌ಸೇರಾ ಕಂಪನಿಯ ವತಿಯಿಂದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನೀಡಲಾದ ಲ್ಯಾಪ್‌ಟಾಪ್‌ಗಳನ್ನು ನೋಡಲ್ ಅಧಿಕಾರಿ ಡಾ.ವೈಷ್ಣವಿ ಮತ್ತು ತಾಲ್ಲೂಕು ವೈದ್ಯಾಧಿಕಾರಿ ಡಾ.ವಿನಯ್ ವಿತರಿಸಿದರು
ಆನೇಕಲ್‌ನಲ್ಲಿ ಸನ್‌ಸೇರಾ ಕಂಪನಿಯ ವತಿಯಿಂದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನೀಡಲಾದ ಲ್ಯಾಪ್‌ಟಾಪ್‌ಗಳನ್ನು ನೋಡಲ್ ಅಧಿಕಾರಿ ಡಾ.ವೈಷ್ಣವಿ ಮತ್ತು ತಾಲ್ಲೂಕು ವೈದ್ಯಾಧಿಕಾರಿ ಡಾ.ವಿನಯ್ ವಿತರಿಸಿದರು   

ಆನೇಕಲ್: ‘ಕೊರೊನಾ ಮಹಾಮಾರಿಯನ್ನು ಎದುರಿಸಲು ಸರ್ಕಾರದ ಜೊತೆಗೆ ಸಂಘ ಸಂಸ್ಥೆಗಳು, ಸಾರ್ವಜನಿಕರು ಕೈ ಜೋಡಿಸಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸೋಂಕು ತಡೆಗೆ ಸಹಕಾರ ನೀಡಬೇಕು’ ಎಂದು ಆನೇಕಲ್‌ ತಾಲ್ಲೂಕು ನೋಡಲ್‌ ಅಧಿಕಾರಿ ಡಾ.ವೈಷ್ಣವಿ ತಿಳಿಸಿದರು.

ಅವರು ಪಟ್ಟಣದಲ್ಲಿ ಬೊಮ್ಮಸಂದ್ರದ ಸನ್‌ಸೇರಾ ಕಂಪನಿಯ ವತಿಯಿಂದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನೀಡಲಾದ 13 ಲ್ಯಾಪ್‌ಟಾಪ್‌ ವಿತರಿಸಿ ಮಾತನಾಡಿದರು.

‘ಕೊರೊನಾ ಹಿನ್ನೆಲೆಯಲ್ಲಿ ಪ್ರತಿ ಗ್ರಾಮಗಳ ಮಾಹಿತಿಯು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಾಗಬೇಕು. ಈ ಮಾಹಿತಿಗಳು ನಿಗದಿತ ಅವಧಿಯಲ್ಲಿ ವಾರ್‌ರೂಮ್‌ಗೆ ಸಲ್ಲಿಕೆಯಾಗಬೇಕು. ಹಾಗಾಗಿ ತಾಲ್ಲೂಕು ಆಡಳಿತವು ಸನ್‌ಸೇರಾ ಕಂಪನಿಗೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಮಾಹಿತಿಗಳ ದಾಖಲೀಕರಣಕ್ಕಾಗಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಲ್ಯಾಪ್‌ಟಾಪ್‌ ನೀಡಿದ್ದಾರೆ’ ಎಂದರು.

ADVERTISEMENT

‘ತಾಲ್ಲೂಕು ವೈದ್ಯಾಧಿಕಾರಿ ಡಾ.ವಿನಯ್‌ ಮಾತನಾಡಿ, ‘ಆನೇಕಲ್‌ ತಾಲ್ಲೂಕಿನಲ್ಲಿ ಸೋಂಕು ಹರಡುವಿಕೆಯನ್ನು ತಡೆಯಲು ತಪಾಸಣೆಯನ್ನು ಬಿಗಿಗೊಳಿಸಲಾಗಿದೆ. ಪ್ರತಿದಿನ ಒಂದು ಸಾವಿರ ಮಂದಿಯ ಕೋವಿಡ್‌ ಪರೀಕ್ಷೆ ಮಾಡಲು ಗುರಿ ನಿಗದಿಪಡಿಸಿಕೊಳ್ಳಲಾಗಿದೆ. ಇದಕ್ಕಾಗಿ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದರು.

ಆನೇಕಲ್‌ ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ನಳಿನಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.